Subscribe to Updates
Get the latest creative news from FooBar about art, design and business.
- e-paper (11-07-2025) Chikkamagalur Express
- ಅಜ್ಞಾನ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿ ಬೆಳಗಿಸುವರೇ ಗುರು
- ಮಹಿಳಾ ಸಬಲೀಕರಣಕ್ಕೆ ಬ್ಯಾಂಕ್ಗಳ ಮೂಲಕ ಸಾಲಸೌಲಭ್ಯ
- e-paper (10-07-2025) Chikkamagalur Express
- ವ್ಯಾಪಾರಸ್ಥರು ನಗರಸಭೆ ನಿಬಂಧನೆಗಳ ಪಾಲಿಸಬೇಕು
- ಕಾಂಗ್ರೆಸ್ ಸರ್ಕಾರ ಬಡವರ ಜೀವನದ ಜೊತೆ ಚೆಲ್ಲಾಟ
- e-paper (09-07-2025) Chikkamagalur Express
- ಯುವಜನತೆ ರಾಷ್ಟ್ರಕವಿ ಕುವೆಂಪು ಆಶಯದಂತೆ ವಿಶ್ವಮಾನವರಾಗಬೇಕು
Author: chikkamagalur express
ಚಿಕ್ಕಮಗಳೂರು: ನಾವು ಮಾತನಾಡಲು ಮಾತೃ ಭಾಷೆ ಮುಖ್ಯ, ವ್ಯವಹರಿಸಲು ಇಂಗ್ಲೀಷ್ ಅಗತ್ಯ, ಈ ಕಾರಣದಿಂದ ಈ ವರ್ಷದಿಂದಲೇ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ಆರಂಭಿಸಿ ಮಕ್ಕಳಿಗೆ ಇಂಗ್ಲೀಷ್ ಶಿಕ್ಷಣ ನೀಡಲಾಗುತ್ತದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಇಂದು ನಗರ ಹೊರವಲಯದ ಹಿರೇಮಗಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಧ್ಯಮ ವರ್ಗದ ಜನರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಕುಟುಂಬಗಳಿಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಕಲ್ಪಿಸಲು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗಳನ್ನು ಆರಂಭಿಸಿ ಮಕ್ಕಳಿಗೆ ಇಂಗ್ಲೀಷ್ ಶಿಕ್ಷಣ ನೀಡಿದರೆ ಪೋಷಕರು ಖಂಡಿತವಾಗಿಯೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಾತಿ ಮಾಡುತ್ತಾರೆ. ಮುಂದಿನ ವರ್ಷ ಇದೇ ಶಾಲೆಗೆ ಮಕ್ಕಳು ಹೆಚ್ಚಾಗಿ ಬರುವಂತೆ ಮಾಡಲು ಮಿನಿ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದೂ ಈ ಸಂದರ್ಭದಲ್ಲಿ…
ಚಿಕ್ಕಮಗಳೂರು: ಬಡವರ ಬಂಧು ದೀನ ದಲಿತರ ಆಶಾಕಿರಣ, ಜನಪ್ರಿಯ ಶಾಸಕ ಹೆಚ್.ಡಿ. ತಮ್ಮಯ್ಯ ಅವರ ೫೬ನೇ ಹುಟ್ಟು ಹಬ್ಬದ ಅಂಗವಾಗಿ ಇಂದು ಅವರ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು ಶಾಸಕರ ನಿವಾಸಕ್ಕೆ ತೆರಳಿ ಕೇಕ್ ಕತ್ತರಿಸಿ ಸಿಹಿ ತಿನಿಸಿ ಸಂಭ್ರಮಿಸಿದರು. ಇಂದು ಬೆಳಗ್ಗೆ ನೂರಾರು ಸಂಖ್ಯೆಯಲ್ಲಿ ಸೇರಿದ ಶಾಸಕರ ಅಭಿಮಾನಿಗಳು ಶಾಸಕ ತಮ್ಮಯ್ಯ ಅವರ ಹುಟ್ಟೂರಾದ ಹಿರೇಮಗಳೂರಿನಲ್ಲಿ ಪಟಾಕಿ ಸಿಡಿಸಿ ಮೆರವಣಿಗೆ ಮೂಲಕ ಬೃಹತ್ ಹಾರವನ್ನು ಜೆಸಿಬಿ ಮೂಲಕ ಹಾಕಿ ಶುಭಾಶಯ ಕೋರಿದರು. ಇದರ ಅಂಗವಾಗಿ ಹಿರೇಮಗಳೂರಿನ ಕೋದಂಡರಾಮ ಸ್ವಾಮಿ ದೇವಾಲಯ ಸೇರಿದಂತೆ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ಏರ್ಪಡಿಸಿದ್ದ ಗ್ರಾಮಸ್ಥರು ಶಾಸಕರಿಗೆ ಮುಂದೆ ಇನ್ನಷ್ಟು ಭವಿಷ್ಯ ಉಜ್ವಲಗೊಳ್ಳುವ ಜೊತೆಗೆ ಆಯುರ್ ಆರೋಗ್ಯ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದರು. ಪತ್ನಿ ಮಂಗಳ ಅವರ ಜೊತೆ ಆಗಮಿಸಿದ ಶಾಸಕ ಹೆಚ್.ಡಿ. ತಮ್ಮಯ್ಯ ಅವರನ್ನು ಹಿರೇಮಗಳೂರು ಗ್ರಾಮಸ್ಥರು, ಮಹಿಳೆಯರು ಪೂರ್ಣಕುಂಭ ಸ್ವಾಗತದೊಂದಿಗೆ ಭರಮಾಡಿಕೊಂಡರು. ಶಾಲಾ ಮಕ್ಕಳು ಆರತಿ ಮಾಡುವ ಮೂಲಕ ಹುಟ್ಟುಹಬ್ಬಕ್ಕೆ ಕಳೆಗಟ್ಟಿಸಿದರು. ರಾಜ್ಯಸರ್ಕಾರ ಅಧಿಕಾರಕ್ಕೆ ಬಂದು…
ಚಿಕ್ಕಮಗಳೂರು: ಮಳೆಯಿಂದ ಮರ ಬಿದ್ದು ಸಾವಿಗೀಡಾದ ಎನ್.ಆರ್.ಪುರ ತಾಲ್ಲೂಕಿನ ಇಬ್ಬರ ಮನೆಗಳಿಗೆ ಇಂದು ತೆರಳಿದ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸಾಂತ್ವನ ಹೇಳಿದರಲ್ಲದೆ, ತಲಾ ೫ ಲಕ್ಷ ರೂ.ಗಳ ಪರಿಹಾರದ ಚೆಕ್ ಅನ್ನು ವಿತರಿಸಿದರು. ಖಾಂಡ್ಯ ಹೋಬಳಿ ಬಿಳುಕೊಪ್ಪ ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ಮರ ಬಿದ್ದು ಮೃತಪಟ್ಟ ಅನಿಲ್ ಪಾಯಸ್ ಅವರ ಮನೆಗೆ ತೆರಳಿ ಪರಿಹಾರದ ಚೆಕ್ ವಿತರಿಸಿದರು. ಅನಂತರ ಅದೇ ತಾಲ್ಲೂಕಿನ ಕೊಗ್ರೆ ಬಳಿ ಆಟೋ ರಿಕ್ಷಾದ ಮೇಲೆ ಮರ ಬಿದ್ದು ಮೃತಪಟ್ಟ ಚಾಲಕ ರತ್ನಾಕರ ಅವರ ಮನೆಗೂ ತೆರಳಿ ಮೃತನ ಸಹೋದರನಿಗೆ ಪರಿಹಾರದ ಚೆಕ್ ವಿತರಿಸಿದರು. ಅನಂತರ ಮಾತನಾಡಿದ ಅವರು, ಪರಿಹಾರ ನೀಡುವುದರಿಂದ ಹೋದ ಜೀವ ಮರಳಿ ಬರುವುದಿಲ್ಲ. ಆದರೂ ಅವರ ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗಲಿ ಎನ್ನುವ ಕಾರಣಕ್ಕಾಗಿ ಪರಿಹಾರ ನೀಡಲಾಗುತ್ತಿದೆ. ಸಂತ್ರಸ್ತರ ಮನೆ ನಿರ್ಮಾಣ ಕಾರ್ಯವೂ ಪೂರ್ಣಗೊಂಡಿಲ್ಲ. ಅದನ್ನು ಶಾಸಕ ಟಿ.ಡಿ.ರಾಜೇಗೌಡ ಅವರು ಪೂರ್ಣಗೊಳಿಸಿಕೊಡುವುದಾಗಿ ತಿಳಿಸಿದ್ದಾರೆ. ಅಲ್ಲದೆ,…
ಚಿಕ್ಕಮಗಳೂರು: ಸಾವಿರಾರು ವರ್ಷಗಳ ಪರಂಪರೆ ಇರುವ ನಮ್ಮ ಯೋಗ ಶಿಕ್ಷಣದ ಕಡೆಗೆ ವಿದೇಶದ ಅನ್ಯ ಧರ್ಮೀಯರೂ ಸಹ ಒಲವು ಹೊಂದಿರುವುದು ನಮ್ಮ ದೇಶದ ಸಂಸ್ಕೃತಿಗೆ ಹೆಮ್ಮೆಯ ಸಂಗತಿ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತ ಸೇವಾದಳ, ಎನ್.ಎಸ್.ಎಸ್. ಘಟಕ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ, ಮೇರಾ ಯುವ ಭಾರತ್ ಮತ್ತಿತರ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಇಂದು ಬೆಳಿಗ್ಗೆ ನಗರದ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ೧೧ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೋಗದ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂಬ ಅಂಶವನ್ನು ನಮ್ಮ ದೇಶದ ಸೈನಿಕರಿಗೂ ಈಗ ಹೇಳಿಕೊಡಲಾಗುತ್ತಿದೆ ಎಂದರು. ಶಿಕ್ಷಣ ಕಲಿಯದಿದ್ದರೆ, ಆರೋಗ್ಯವನ್ನು ಕಾಪಾಡಿಕೊಳ್ಳದಿದ್ದರೆ, ಬದುಕನ್ನು…
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪ್ರಪ್ರಥಮ ದಲಿತ ಸಾಹಿತ್ಯ ಸಮ್ಮೇಳನ ಆಗಸ್ಟ್ ೨೩ ರಂದು ಚಿಕ್ಕಮಗಳೂರಿನ ಕುವೆಂಪು ಕಲಾ ಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿ?ತ್ತು ಮತ್ತು ದಲಿತ ಸಾಹಿತ್ಯ ಪರಿ?ತ್ತು ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಮತ್ತು ಜಿಲ್ಲಾ ದಲಿತ ಸಾಹಿತ್ಯ ಪರಿ?ತ್ತಿನ ಅಧ್ಯಕ್ಷರಾದ ಕುಪ್ಪಾಳು ಶಾಂತಮೂರ್ತಿ ಅವರ ನೇತೃತ್ವದಲ್ಲಿ ಜಿಲ್ಲಾ ದಲಿತ ಸಾಹಿ ತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕಸಾಪ ಕೋಶಾಧ್ಯಕ್ಷ ಬಿ.ಪ್ರಕಾಶ್ ತಿಳಿಸಿದರು. ಅಂದು ಸಮ್ಮೇಳನದ ದಿನ ಧ್ವಜಾರೋಹಣ ನಂತರ ಸಮ್ಮೇಳನ ಅಧ್ಯಕ್ಷರ ಮೆರವಣಿಗೆ, ಉದ್ಘಾಟನೆ. ಕಾರ್ಯಕ್ರಮ ನಂತರ ದಲಿತ ಸಾಹಿತ್ಯ ಕುರಿತ ಗೋಷ್ಠಿ ಮತ್ತು ಕವಿಗೋಷ್ಟಿಗಳು ನಡೆಯಲಿದ್ದು ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಸಮ್ಮೇಳನದಲ್ಲಿ ನಾಡಿನ ಹಲವಾರು ಸಾಹಿತಿಗಳು ಮತ್ತು ಸಾಹಿತ್ಯ ಆಸಕ್ತರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲೆಯ ಮೂವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ ಮತ್ತು ಜಿಲ್ಲೆ ಯ ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು ಎಂದು ತಿಳಿಸಿದರು. District’s first Dalit…
ಕಡೂರು: ಬಹಳಷ್ಟು ವರ್ಷದಿಂದ ನೆನಗುದಿಗೆ ಬಿದ್ದಿದ್ದ ಹಿಂದಿನ ಎಲ್ಲ ರಾಜಕಾರಣಿಗಳು ಮರೆತಿದ್ದ ಹಳ್ಳಿಗಾಡಿನ ಪ್ರದೇಶದ ಅಭಿವೃದ್ಧಿಯನ್ನು ತಮ್ಮ ಅಧಿಕಾರದ ಅವಧಿಯಲ್ಲಿ ಮಾಡಿದ ತೃಪ್ತಿ ತಮಗಿದೆ ಎಂದು ಶಾಸಕ ಕೆ.ಎಸ್. ಆನಂದ್ ಹ? ವ್ಯಕ್ತಪಡಿಸಿದರು. ಕಡೂರಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ನಿರ್ಮಿಸಿರುವ ಕೆಆರ್‌ಐಡಿಎಲ್‌ನ ನೂತನ ಕಛೇರಿಯ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಡಿಮೆ ವೆಚ್ಚದಲ್ಲಿ ಗುಣಮಟ್ಟದ, ಸುಂದರವಾದ ಕಟ್ಟಡ ನಿರ್ಮಾಣ ಈ ಸಂಸ್ಥೆ ಮಾಡಿದೆ ಎಂದು ಶ್ಲಾಘಿಸಿದರು. ಕೆಆರ್‌ಐಡಿಎಲ್ ಸಂಸ್ಥೆಗೆ ಜಾಗ ನೀಡುವಲ್ಲಿ ಇದ್ದ ಸಮಸ್ಯೆಯನ್ನು ಪರಿಹರಿಸಿ ಈ ಜಾಗ ನೀಡಿದ ಕಡೂರುಹಳ್ಳಿ ಗ್ರಾಮ ಪಂಚಾಯಿತಿಯ ಮತ್ತು ಸುತ್ತಮುತ್ತಲಿನ ಗ್ರಾಮದವರಿಗೆ ಅಭಿನಂದನೆ ಸಲ್ಲಿಸಿದರು. ಕೆಆರ್‌ಐಡಿಎಲ್ ಸಂಸ್ಥೆ ಸುಮಾರು ೫೦ ಕೋಟಿ ರೂ.ಗಳ ಕಾಮಗಾರಿ ನಡೆಸಿದೆ. ೬ ಕೋಟಿ ಮುಜರಾಯಿ ಇಲಾಖೆಗೆ, ೬ ಕೋಟಿ ಸಮುದಾಯ ಭವನ ನಿರ್ಮಾಣಕ್ಕೆ, ೧೨ ಕೋಟಿ ಗ್ರಾಮೀಣ ರಸ್ತೆಯ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕ, ರೈತ ಸಂಪರ್ಕ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಇದಲ್ಲದೆ ಜಯರಾಮ…
ಚಿಕ್ಕಮಗಳೂರು: – ವಿಡಂಬನೆ, ಲೋಕ ಶಿಕ್ಷಣ, ನೈತಿಕ ಮೌಲ್ಯಗಳನ್ನು ನವಿರಾಗಿ ಕಟ್ಟಿಕೊಟ್ಟ ಸಿದ್ಧಯ್ಯಪುರಾಣಿಕ ಆಧುನಿಕ ವಚನಕಾರರ ಧ್ರುವತಾರೆ ಎಂದು ಸಾಹಿತಿ, ವಾಗ್ಮಿ ಚಟ್ನಳ್ಳಿಮಹೇಶ್ ನುಡಿದರು. ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ ಹಾಗೂ ಅಖಿಲ ಭಾರತೀಯ ಸಾಹಿತ್ಯಪರಿಷದ್ ಸಂಯುಕ್ತವಾಗಿ ನೈಟಿಂಗೇಲ್ ಸ್ಕೂಲ್ ಆಫ್ ನರ್ಸಿಂಗ್‌ನಲ್ಲಿ ‘ಡಾ.ಸಿದ್ಧಯ್ಯಪುರಾಣಿಕ’ ಜನ್ಮದಿನಾಚರಣೆ ಅಂಗವಾಗಿ ಇಂದು ಆಯೋಜಿಸಿದ್ದ ಕಾರ್‍ಯಕ್ರಮದಲ್ಲಿ ‘ಪುರಾಣಿಕರ ಸಾಹಿತ್ಯದಲ್ಲಿ ಸಾಮಾಜಿಕ ಮೌಲ್ಯ’ ಕುರಿತಂತೆ ಅವರು ಉಪನ್ಯಾಸ ನೀಡಿ ಸಂವಾದಿಸಿದರು. ನಾಡುಕಂಡ ದಕ್ಷ ಅಧಿಕಾರಿಗಳಲ್ಲಿ ಒಬ್ಬರಾದ ಡಾ.ಸಿದ್ಧಯ್ಯಪುರಾಣಿಕರು ‘ಸ್ವತಂತ್ರಧೀರ ಸಿದ್ಧೇಶ್ವರ’ ಅಂಕಿತದೊಂದಿಗೆ ಸುಮಾರು ೨೦೦೦ಕ್ಕೂ ಹೆಚ್ಚು ಆಧುನಿಕ ವಚನಗಳನ್ನು ರಚಿಸಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ನವೀರಾದ ಹಾಸ್ಯ, ಮೊನಚಾದ ಟೀಕೆ, ಬದುಕಿನ ಮೌಲ್ಯಗಳು, ವಿಡಂಬನೆಗಳ ಮೂಲಕ ಗಮನ ಸೆಳೆದವರು. ಐಎಎಸ್ ಅಧಿಕಾರಿಗಳಾಗಿ ಕನ್ನಡದ ಸೇವೆ ಮಾಡಿದ ಡಾ.ಮಾಸ್ತಿವೆಂಕಟೇಶ ಅಯ್ಯಂಗಾರ, ಕೆ.ಎನ್.ನಾಗೇಗೌಡ ಮತ್ತಿತರರ ಸಾಲಿನಲ್ಲಿ ನಿಲ್ಲಬಹುದಾದ ಸಿದ್ಧಯ್ಯಪುರಾಣಿಕರು ಲೋಕ ನೆಮ್ಮದಿಗೆ ಪುಷ್ಠಿ ನೀಡುವ ಅಮೃತ ಘಳಿಗೆ ನಿರ್ಮಾಣಕ್ಕೆ ಪೂರಕವಾದ ವಚನಗಳನ್ನು ರಚಿಸಿದವರು. ಜೀವ ಸಂಕುಲದ ಹೊಂದಾಣಿಕೆಯ ಬಗ್ಗೆ ನಿಸರ್ಗಜ್ಞಾನ ಪೂರಕವಾದ…