Subscribe to Updates
Get the latest creative news from FooBar about art, design and business.
- e-paper (20-07-2025) Chikkamagalur Express
- ಹಿಂದುತ್ವದ ಬದುಕು ಪ್ರಾಚೀನ ಸಂಸ್ಕೃತಿ-ನಾಗರೀಕತೆಯ ಭಾಗ
- ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ನಗರ ಮಂಡಲ ಪ್ರತಿಭಟನೆ
- ಸರ್ಕಾರ ಬದುಕಿಗೆ ಆದ್ಯತೆ ನೀಡಿ ಮೂಲ ಸೌಕರ್ಯ ಕಲ್ಪಿಸಿದೆ
- e-paper (19-07-2025) Chikkamagalur Express
- ಸಾರಿಗೆ ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡುವಂತೆ ಸೂಚನೆ
- 2047ಕ್ಕೆ `ಏಳು ಬೀಜಗಳಿಂದ ಏಳು ಲಕ್ಷ ಟನ್ಗೆ ಭಾರತದ ಕಾಫಿ ಜಿಗಿತ’
- e-paper (18-07-2025) Chikkamagalur Express
Author: chikkamagalur express
ಚಿಕ್ಕಮಗಳೂರು: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ರಾಜ್ಯ ಉಪಾಧ್ಯಕ್ಷರು ಹಾಗೂ ಪ್ಲಾಂಟೇಷನ್ ಯೂನಿಯನ್ ನ ಪ್ರಧಾನ ಕಾರ್ಯದರ್ಶಿ ಹಿರಿಯ ಕಾರ್ಮಿಕ ಮುಖಂಡ ಕೆ. ಗುಣಶೇಖರ್ ರವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಕ್ಕೆ ಒಳಗಾಗಿದ್ದ ಅವರು ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಶನಿವಾರ ಮಧ್ಯಾಹ್ನ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನಡೆಯಲಿದೆ. ಗುಣಶೇಖರ್ ಅವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತು ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಐದು ದಶಕಗಳಿಂದ ಕಾಫಿ, ಟೀ, ರಬ್ಬರ್ ತೋಟಗಳ ಕಾರ್ಮಿಕರ ಮುಖಂಡರಾಗಿ ಅವಿರತ ಸೇವೆ ಸಲ್ಲಿಸಿದ್ದರು. ಭಾರತ ಕಮ್ಯುನಿಸ್ಟ್ ಪಕ್ಷದ ಹಿರಿಯ ಮುಖಂಡರಾಗಿದ್ದರು. ದಿವಂಗತ ಬಿ.ಕೆ. ಸುಂದರೇಶ್ ಅವರ ಅಪ್ಪಟ ಅನುಯಾಯಿಯಾಗಿದ್ದರು. ಕಾರ್ಮಿಕರ ಪರವಾಗಿ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಲ್ಲಿ ತೊಗಡಿಸಿಕೊಂಡಿದ್ದರು. ಗುಣಶೇಖರ್ ಅವರ ನಿಧನಕ್ಕೆ ಸಿಪಿಐ ಪಕ್ಷ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. Senior labor leader K. Gunasekhar passed away
ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಗ್ರಾಮದಲ್ಲಿ ವಿವಾದಿತ ಜಾಗಕ್ಕೆ ಸಂಬಂಧಿಸಿದಂತೆ ದಲಿತ ಸಮಾಜ ಹಾಗೂ ಒಕ್ಕಲಿಗ ಸಮಾಜದ ನಡುವಿನ ಗಲಾಟೆ ತೀವ್ರವಾಗಿದ್ದು, ವಿವಾದಿತ ಸ್ಥಳದಲ್ಲೇ ಇಂದು ದಲಿತರು ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ನಡೆಸಿದ್ದಾರೆ. ಈ ವೇಳೆ ಒಕ್ಕಲಿಗ ಸಮುದಾಯ ಹಾಗೂ ದಲಿತರ ನಡುವೆ ವಾಗ್ದಾಳಿ ನಡೆದಿದ್ದಲ್ಲದೆ ಒಕ್ಕಲಿಗ ಸಮುದಾಯದ ಮಹಿಳೆಯರು ಶವ ಸಂಸ್ಕಾರದ ಗುಂಡಿಯೊಳಗೆ ಇಳಿದು ಪ್ರತಿಭಟನೆ ನಡೆಸಿದ ಘಟನೆಯೂ ನಡೆದಿದೆ. ಆಲ್ದೂರು ಗ್ರಾಮದ ರಸ್ತೆ ಪಕ್ಕದ ಜಾಗದ ಬಗ್ಗೆ ಹಿಂದಿನಿಂದಲೂ ವಿವಾದವಿತ್ತು. ದಲಿತರು ಈ ಜಾಗ ನಮ್ಮ ಸ್ಮಶಾನಕ್ಕೆ ಸೇರಿದ್ದು ಎಂದರೆ, ಒಕ್ಕಗಲಿರು ಇದು ಒಕ್ಕಲಿಗರ ಸಮುದಾಯ ಭವನಕ್ಕೆ ಸೇರಿದ ಜಾಗ ಎಂದು ಹೇಳುತ್ತಲೇ ಬಂದಿದ್ದರು. ಹೀಗಾಗಿ ದಶಕಗಳಿಂದಲೂ ಈ ಜಾಗ ವಿವಾದಿತ ಪ್ರದೇಶವೇ ಆಗಿತ್ತು. ಈ ನಡುವೆ ಶುಕ್ರವಾರ ಆಲ್ದೂರು ಗ್ರಾಮದಲ್ಲಿ ದಲಿತ ಮಹಿಳೆಯೋರ್ವರು ಮೃತಪಟ್ಟಿದ್ದು, ವಿವಾದಿತ ಜಾಗದಲ್ಲೇ ಗುಂಡಿ ತೆಗೆದು ಮಹಿಳೆ ಅಂತ್ಯ ಸಂಸ್ಕಾರಕ್ಕೆ ದಲಿತರು ಮುಂದಾಗಿದ್ದರು. ವಿಷಯ ತಿಳಿದ ಒಕ್ಕಲಿಗ ಸಮುದಾಯದವರು ಸ್ಥಳಕ್ಕೆ ತೆರಳಿ ಅಂತ್ಯ…
ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಬಹಳ ಅನನ್ಯವಾಗಿದ್ದು, ಜನಪ್ರತಿನಿಧಿಗಳು ಹಾಗೂ ಸ್ಥಳೀಯರು ಸಹಕಾರ ನೀಡುವುದು ಅಗತ್ಯವಾಗಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಇಂದು ನಗರದ ವಿವಿಧ ವಾರ್ಡ್‌ಗಳಲ್ಲಿ ಸುಮಾರು ೧.೧೫ ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿರುವ ದಿಢೀರ್ ನಗರ, ಹಕ್ಕಿಪಿಕ್ಕಿ ಕಾಲೋನಿ, ಐ.ಜಿ ಬಡಾವಣೆ, ಶಾಂತಿನಗರ-೨, ಕುಪ್ಪೇನಹಳ್ಳಿ, ಕಲ್ಯಾಣನಗರ ಈ ನೂತನ ಅಂಗನವಾಡಿ ಕೇಂದ್ರಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಥಳೀಯರ ಸಹಕಾರ ದೊರೆತಾಗ ಉತ್ತಮ ಸೇವೆ ಸಲ್ಲಿಸಲು ಸಹಕಾರಿಯಾಗಲಿದೆ ಎಂದ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ಅಂಗನವಾಡಿ ಕೇಂದ್ರಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸುವುದು ಸರ್ಕಾರದ ಕರ್ತವ್ಯ ಮತ್ತು ಜವಾಬ್ದಾರಿ ಎಂದರು. ಕೆಆರ್‌ಡಿಎಲ್ ಮತ್ತು ನಿರ್ಮಿತಿ ಕೇಂದ್ರದಿಂದ ನಿರ್ಮಾಣ ಮಾಡಿರುವ ಅಂಗನವಾಡಿ ಕೇಂದ್ರಗಳು ಉತ್ತಮ ಗುಣಮಟ್ಟಗಳಿಂದ ಕೂಡಿದ್ದು, ಕೇಂದ್ರಗಳಲ್ಲಿ ಬಡವರ ಮಕ್ಕಳು ಅಭ್ಯಾಸ ಮಾಡುವುದರಿಂದ ತೊಂದರೆಯಾಗದಂತೆ ತಲಾ ೨೦ ಲಕ್ಷ ರೂ ವೆಚ್ಚದಲ್ಲಿ ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.…
ಚಿಕ್ಕಮಗಳೂರು: ನಗರ ಸೇರಿದಂತೆ ಜಿಲ್ಲೆಯಾದ್ಯಂತ ನೂರಾರು ಮಂದಿ ಮಾಲಾ ಧಾರಣೆ ಮಾಡುವ ಮೂಲಕ ವಿಶ್ವಹಿಂದೂ ಪರಿಷತ್-ಬಜರಂಗದಳದ ವತಿಯಿಂದ ನಡೆಯುವ ದತ್ತ ಜಂಯಂತಿ ಹಾಗೂ ದತ್ತಮಾಲಾ ಅಭಿಯಾನಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಚಿಕ್ಕಮಗಳೂರು ನಗರದ ಆರ್‌ಜಿ ರಸ್ತೆ ಶ್ರೀ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ವಿಶ್ವಹಿಂದೂ ಪರಿಷತ್‌ನ ಪ್ರಾಂತ ಕಾರ್ಯಕಾರಣಿ ಸದಸ್ಯ ರಘು ಸಕಲೇಶಪುರ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಸೇರಿದಂತೆ ೧೦೭ ಮಂದಿ ಶುಕ್ರವಾರ ಬೆಳಗ್ಗೆ ದತ್ತ ಮಾಲೆ ಧರಿಸಿದರು. ಬಜರಂಗದಳದ ಜಿಲ್ಲಾ ಸಹ ಸಂಚಾಲಕ ಶ್ಯಾಂ ವಿ.ಗೌಡ, ವಿಭಾಗ ಸಂಯೋಜಕ್ ಶಶಾಂಕ್ ಹೆರೂರು, ವಿಭಾಗ ಸಹ ಕಾರ್ಯದರ್ಶಿ ಆರ್.ಡಿ.ಮಹೇಂದ್ರ, ವಿಶ್ವಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಯೋಗೀಶ್ ರಾಜ್ ಅರಸ್, ಜಿಲ್ಲಾ ಸಹ ಕಾರ್ಯದರ್ಶಿ ಅಮಿತ್ ಮತ್ತಿತರೆ ಪ್ರಮುಖರು ಮಾಲೆ ಧಾರಣೆ ಮಾಡಿದರು. ಕಾಮಧೇನು ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ರಘು ಅವಧಾನಿ ಅವರು ಶಾಸ್ತ್ರೋಕ್ತವಾಗಿ ಎಲ್ಲರಿಗೂ ಮಾಲೆ ಧಾರಣೆ ಮಾಡಿಸಿದರು. ಇದೇ ವೇಳೆ ಗಣ ಹೋಮ, ದತ್ತ ಹೋಮ ಮತ್ತಿತರೆ ಪೂಜಾ…
ಚಿಕ್ಕಮಗಳೂರು: ಭಾರತದ ಬೆಳಕು, ಆಧುನಿಕ ಭಾರತದ ನಿರ್ಮಾತೃ ಡಾ. ಬಿ.ಆರ್ ಅಂಬೇಡ್ಕರ್ ಅವರ ಆರ್ಥಿಕ, ಸಾಮಾಜಿಕ, ರಾಜಕೀಯ ಚಿಂತನೆಗಳು ದೇಶದ ಅಭಿವೃದ್ಧಿಗೆ ಸಹಕರಿಸುತ್ತದೆ ಎಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಡಾ. ಬಿ.ಆರ್ ಅಂಬೇಡ್ಕರ್ ಅವರ ೬೮ನೇ ಪರಿನಿರ್ವಾಣ ದಿನದ ಅಂಗವಾಗಿ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ಪ್ರಪಂಚ ಕಂಡ ಅತ್ಯಂತ ಪ್ರಭುದ್ಧ ಮಾನವತಾವಾದಿ ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್. ಸಮಾಜ ಸುಧಾರಕ, ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ಬಹುಭಾಷಾ ವಾಗ್ಮಿ ಹಾಗೂ ಸಾಮಾಜಿಕ ಚಿಂತಕ ಬಹು ಪ್ರತಿಭೆಯುಳ್ಳ ಬಾಬಾ ಸಾಹೇಬರು ಸಮಾಜದಲ್ಲಿನ ಅಸ್ಪೃಶ್ಯತೆ, ಜಾತಿವಾದ, ಅಸಮಾನತೆಯಂತಹ ಸಾಮಾಜಿಕ ಪಿಡುಗುಗಳ ಕತ್ತಲನ್ನು ಹೋಗಲಾಡಿಸಿ ಸಮಾನತೆ, ಸಹಿಷ್ಣುತೆ, ಸಹೋದರತ್ವ, ಸಾರ್ವಭೌಮತ್ವದ ದೀಪ ಹಚ್ಚಿ ಭಾರತದ ಸಂವಿಧಾನ ರಚಿಸಿ ದೇಶದ ಬೆಳಕಾಗಿ ನಿಂತವರು. ಅವರ ವಿಚಾರ ದಾರೆಗಳು ಸದಾ ಜೀವಂತವಾದುದು ಎಂದರು. ಸಮಾಜದ ಶೋಷಿತ ವರ್ಗದವರ ಧ್ವನಿಯಾಗಿ…
ಚಿಕ್ಕಮಗಳೂರು: ಜಿಲ್ಲಾ ಕೇಂದ್ರದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಅವ್ಯವಸ್ಥೆಯ ಆಗರವಾಗಿದ್ದು, ಇದರ ನಿರ್ವಹಣೆಯಲ್ಲಿ ವಿಫಲವಾಗಿರುವ ಸಾರಿಗೆ ಜಿಲ್ಲಾ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ಮಾಡಿ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ತಿಳಿಸಿದರು. ಇಂದು ಜಿಲ್ಲೆಗೆ ಆಗಮಿಸಿದ್ದ ಅವರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ನಂತರ ಪ್ರೆಸ್‌ಕ್ಲಬ್ ಆವರಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಪಂಚ ಗ್ಯಾರಂಟಿಗಳ ಪೈಕಿ ಪ್ರಮುಖ ಯೋಜನೆಯಾಗಿರುವ ಶಕ್ತಿ ಯೋಜನೆ ಕುರಿತಂತೆ ಸಾರಿಗೆ ಸಂಸ್ಥೆಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಲು ಬಸ್ ನಿಲ್ದಾಣಕ್ಕೆ ಭೇಟಿನೀಡಿದಾಗ ಹಲವಾರು ನ್ಯೂನತೆಗಳು ತಮ್ಮ ಗಮನಕ್ಕೆ ಬಂದಿರುವುದಾಗಿ ಹೇಳಿದರು. ಈ ಬಸ್ ನಿಲ್ದಾಣದಲ್ಲಿರುವ ಶೌಚಾಲಯದಲ್ಲಿ ದುಬಾರಿ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ತಾಯಿ ಮಗುವಿಗೆ ಹಾಲುಣಿಸುವ ಮಡಿಲು ಕೇಂದ್ರವನ್ನು ಗೋದಾಮು ಮಾಡಿಕೊಳ್ಳಲಾಗಿದೆ…
ಚಿಕ್ಕಮಗಳೂರು: ಸರಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ಆಕಾಂಕ್ಷಿಯಾಗಿರುವ ಹೇಮಂತ್ ಕುಮಾರ್ ಮತ್ತು ತಂಡ ಜಿಲ್ಲಾ ಸಂಘದ ಹಾಲಿ ಕಾರ್ಯಕಾರಿ ಮಂಡಳಿ ವಿರುದ್ಧ ಮಾಡಿರುವ ಆರೋಪ ನಿರಾಧಾರ ಎಂದು ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿಗೆ ಪದಾಧಿಕಾರಿ ಆಯ್ಕೆಗೆ ಚುನಾವಣೆ ಸನ್ನಿಹಿತವಾಗಿರುವ ಈ ಸಂದರ್ಭದಲ್ಲಿ ಅವರು ಮಾಡಿರುವ ಆರೋಪಗಳು ಸಂಘಟನೆಗೆ ವಿನಾಶಕಾರಿಯಾಗಿ ಪರಿಣಮಿಸಲಿವೆ ಎಂದು ಸ್ಪಷ್ಟಪಡಿಸಿದರು. ನಿಗದಿತ ಸಮಯಕ್ಕೆ ಮತದಾರರ ಪಟ್ಟಿಯನ್ನು ತಯಾರಿಸಿ ರಾಜ್ಯ ಸಂಘದಿಂದ ಅನುಮೋದನೆ ಪಡೆಯಲಾಗಿದೆ. ಆದರೆ, ಆಯಾ ಇಲಾಖೆಯಲ್ಲಿ ಮತದಾರರ ಪಟ್ಟಿ ಕೊಡಿ ಎಂದು ಕೇಳಿದಾಗ, ಕೆಲವರು ಪಟ್ಟಿಯನ್ನೇ ನೀಡಿರಲಿಲ್ಲ. ಇದೇ ಹೇಮಂತ್‌ಕುಮಾರ್ ಅವರು ಕಂದಾಯ ಇಲಾಖೆಯ ಪಟ್ಟಿಯನ್ನೇ ನೀಡಿರಲಿಲ್ಲ. ಈಗ ನಮ್ಮ ಇಲಾಖೆಯ ೫ ನೌಕರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಾರೆ ಎಂದು ದೂರಿದರೆ ಎಷ್ಟು ಸರಿ ಎಂದು ಪ್ರಶ್ನಿಸಿದರು. ಜುಲೈ ೧ ರಿಂದ ೧೦ ರವರೆಗೆ ಮತದಾರರ ಕರಡು ಪ್ರತಿ…
ಚಿಕ್ಕಮಗಳೂರು: ಯುವಜನತೆ ದೇಶಪ್ರೇಮವನ್ನು ಬೆಳೆಸಿಕೊಂಡಲ್ಲಿ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಚಿಕ್ಕಮಗಳೂರು-ಉಡುಪಿ ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಅಭಿಪ್ರಾಯಿಸಿದರು. ಅವರು ನಗರದ ಕುವೆಂಪು ಕಲಾಮಂದಿರದಲ್ಲಿ ವಿದ್ಯಾರ್ಥಿ ಗ್ರೂಪ್ ಆಫ್ ಇನ್ಸಿಟ್ಯೂಷನ್ ಆಯೋಜಿಸಿದ್ದ ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಕ್ಷೇತ್ರದ ಜವಾಬ್ದಾರಿ ಪ್ರಮುಖವಾಗಿದ್ದು ಸಂಸ್ಥೆ ಈ ನಿಟ್ಟಿನಲ್ಲಿ ಮತ್ತ? ಕೆಲಸ ನಿರ್ವಹಿಸಲಿ ಎಂದು ಆಶಿಸಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿ?ತ್ತಿನ ಸದಸ್ಯ ಕೇಶವಪ್ರಸಾದ್ ಗೌರವ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಯಶಸ್ಸಿನ ಹಸಿವು ಹೆಚ್ಚಾಗಿರಬೇಕು ಎಂದರು. ಇದೇ ಸಂದರ್ಭ ಕೌಶಲ್ಯಾಧಾರಿತ ಶಿಕ್ಷಣ ನೀಡುವಲ್ಲಿ ನಿರಂತರತೆಯನ್ನು ಕಾಯ್ದುಕೊಂಡಿರುವ ವಿದ್ಯಾರ್ಥಿ ಗ್ರೂಪ್‌ನ ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಗೌರವ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಆಯುಕ್ತರಾದ ಎಂ.ಎನ್.ಷಡಾಕ್ಷರಿ ಶಿಸ್ತು, ಕಾರ್ಯಕ್ಷಮತೆಯೊಂದಿಗೆ ಕರ್ತವ್ಯ ನಿರ್ವಹಿಸಿದ್ದಲ್ಲಿ ಮಾತ್ರ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು, ವೃತ್ತಿಯಲ್ಲಿ ದಿನೇ…