Author: chikkamagalur express

ಚಿಕ್ಕಮಗಳೂರು: – ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಿಂಚಿಣಿದಾರರನ್ನು ಅನರ್ಹಗೊಳಿಸುವ ಮೂಲಕ ಸಾಮಾನ್ಯ ಜನರು, ಬಡವರು, ದುರ್ಬಲರ ಮೇಲೆ ಗಧಾಪ್ರಹಾರ, ದೌರ್ಜನ್ಯ ಮಾಡಲು ಹೊರಟಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು. ಗುರುವಾರ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮೂರ್‍ನಾಲ್ಕು ದಿನಗಳ ಹಿಂದೆ ಹೊಡಿಸಿರುವ ಸುತ್ತೋಲೆಯಲ್ಲಿ ೬೦-೬೫ ವರ್ಷ ಮೇಲ್ಪಟ್ಟ ೧೪ ಲಕ್ಷ ಮಂದಿ ಹಿರಿಯ ಸಂದ್ಯಾ ಸುರಕ್ಷಾ ಫಲಾನುಭವಿಗಳು ಮತ್ತು ೬೫ ವರ್ಷ ಮೇಲ್ಪಟ್ಟ ೯ ಲಕ್ಷ ಮಂದಿ ವೃದ್ಧಾಪ್ಯ ವೇತನ ಪಡೆಯುವ ಬಡ ಪಿಂಚಿಣಿದಾರರನ್ನು ಅನರ್ಹಗೊಳಿಸುವ ಹುನ್ನಾರ ನಡೆಸಿದೆ. ಇದಕ್ಕಾಗಿ ಪರಿಶೀಲನೆ ನಡೆಸಲು ಸೂಚನೆ ನೀಡಿದೆ ಎಂದು ದೂರಿದರು. ವೃದ್ಧರ ಜೀವಿತದ ಕೊನೆಯ ದಿನಗಳಲ್ಲಿ ಸಣ್ಣ ಪುಟ್ಟ ಆರೋಗ್ಯ ವ್ಯತ್ಯಾಸಗಳಾದಲ್ಲಿ, ಔಷಧಿ-ಮಾತ್ರೆ ಇನ್ನಿತರೆ ಖರ್ಚಿಗೆ ನೆರವಾಗಲು ಮತ್ತು ಜೀವಕ್ಕೊಂದು ಭದ್ರತೆಕೊಡುವ ದೃಷ್ಠಿಯಿಂದ ಯಡಿಯೂರಪ್ಪ ಅವರ ಸರ್ಕಾರ ಇದ್ದಾಗ ಸಂಧ್ಯಾ ಸುರಕ್ಷಾ ಯೋಜನೆ ಜಾರಿಗೆ ತರಲಾಗಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರ ಇದೀಗ ಪ್ರತಿ…

Read More

ಚಿಕ್ಕಮಗಳೂರು: ಉತ್ತಮ ಆರೋಗ್ಯ, ಉತ್ತಮ ಆಹಾರ, ಉತ್ತಮ ಯೋಗಾಭ್ಯಾಸ ಇವು ನಾಗರೀಕರ ಆರೋಗ್ಯ ಕಾಪಾಡುವಲ್ಲಿ ಸಹಕಾರಿ ಎಂದು ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ಅಭಿಪ್ರಾಯಿಸಿದರು. ಅವರು ಇಂದು ೧೧ನೇ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಯೋಗ ತರಬೇತಿ ಸಂಸ್ಥೆಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಎಂಬ ಘೋಷವಾಕ್ಯದೊಂದಿಗೆ ಯೋಗನಡಿಗೆ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ಯೋಗಾಭ್ಯಾಸವನ್ನು ಪ್ರತಿನಿತ್ಯ ಪಾಲಿಸಿಕೊಂಡು ಬಂದಲ್ಲಿ ರೋಗಮುಕ್ತ ದೇಶವಾಗಿಸಲು ಪರಿಣಾಮಕಾರಿಯಾಗಲಿದ್ದು, ಜೂ.೨೧ ರಂದು ನಡೆಯಲಿರುವ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಯೋಗದ ಬಗ್ಗೆ ವಿಶ್ವದೆಲ್ಲೆಡೆ ಜಾಗೃತಿ ಮೂಡಿಸಿದ್ದಾರೆಂದು ಹೇಳಿದರು. ಇಂದು ಕಲುಷಿತ ಆಹಾರ ಸೇವನೆಯಿಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಪ್ರತಿಯೊಬ್ಬರೂ ಆರೋಗ್ಯಕ್ಕೆ ಆದ್ಯ ಗಮನ ನೀಡಿಬೇಕಾದರೆ…

Read More

ಚಿಕ್ಕಮಗಳೂರು: ತಾಲ್ಲೂಕು ದಾಸರಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಮೂರನೇ ಬಾರಿಗೆ ಬಿಜೆಪಿ ಬೆಂಬಲಿತ ಟಿ.ಎಸ್. ಶಿವೇಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್ ಮಾತನಾಡಿ, ಕಳೆದ ೧೫ ವರ್ಷಗಳಿಂದ ಬಿಜೆಪಿಯ ಕಟ್ಟಾಳುಗಳಾಗಿ ಇಲ್ಲಿರುವ ೮ ಗ್ರಾ.ಪಂ ಕ್ಷೇತ್ರಗಳಲ್ಲಿ ನಾಯಕತ್ವ ಬೆಳೆಸಿಕೊಂಡು ಚುನಾವಣೆ ಸಂದರ್ಭದಲ್ಲಿ ೭ ಸದಸ್ಯರನ್ನು ಗೆಲ್ಲಿಸುವ ಮೂಲಕ ಸಾಧನೆ ಮಾಡಿರುವ ನೂತನ ಅಧ್ಯಕ್ಷ ಶಿವೇಗೌಡರಿಗೆ ಎಲ್ಲಾ ಸದಸ್ಯರು ಒಮ್ಮತದ ಸಹಕಾರ ನೀಡಿದ್ದಾರೆಂದು ಶ್ಲಾಘಿಸಿದರು. ಶಿವೇಗೌಡರ ಅಧಿಕಾರವಧಿಯಲ್ಲಿ ಈ ಪಂಚಾಯಿತಿಯಲ್ಲಿ ಹಲವಾರು ವಿವಿಧ ಅಭಿವೃದ್ಧಿ ಕೆಲಸಗಳಾಗಿದ್ದು, ಈ ಕಾರ್ಯದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಕೊಡುಗೆ ಜೊತೆಗೆ ಇವರ ಪ್ರಯತ್ನ ಬಹಳ ಮುಖ್ಯ ಎಂದು ಹೇಳಿದರು. ಬಡವರು, ಕೂಲಿಕಾರ್ಮಿಕರ ಕೆಲಸಗಳಿಗೆ ಹೆಚ್ಚು ಒತ್ತುನೀಡುವ ಮೂಲಕ ಶ್ರದ್ಧೆ, ನಿಷ್ಠೆಯಿಂದ ಅವರ ಪರವಾಗಿ ಕೆಲಸ ಮಾಡುತ್ತಿರುವ ಶಿವೇಗೌಡರು ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ ವಿಶ್ವಾಸದೊಂದಿಗೆ ಅಧಿಕಾರದಲ್ಲಿ ಮುಂದುವರೆಯಲಿ, ಬಿಜೆಪಿ ಪಕ್ಷಕ್ಕೆ…

Read More

ಚಿಕ್ಕಮಗಳೂರು:  ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಹೋಟೆಲ್, ಬೇಕರಿ, ಸಹಿ-ಖಾರ ತಿಂಡಿಗಳ ತಯಾರಕರು, ಕಲ್ಯಾಣ ಮಂಟಪ ಮತ್ತಿತರೆ ಉದ್ದಿಮೆದಾರರು ಸ್ವಚ್ಛತೆಗೆ ಆಧ್ಯತೆ ನೀಡಿ ಸಾಂಕ್ರಾಮಿಕ ರೋಗಗಳ ತಡೆಗೆ ನಗರಸಭೆಯೊಂದಿಗೆ ಕೈ ಜೋಡಿಸಬೇಕು ಎಂದು ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಮನವಿ ಮಾಡಿದರು. ಅವರು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಬೇಕರಿ, ಸಿಹಿ-ಖಾರ ತಿನಿಸುಗಳ ತಯಾರಕರು, ಮಾರಾಟಗಾರರು, ಸ್ವೀಟ್ಸ್ ಸ್ಟಾಲ್, ಕಾಂಡಿಮೆಂಟ್ಸ್, ಕಲ್ಯಾಣ ಮಂಟಪಗಳ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಹಾರ ನಮ್ಮ ಆರೋಗ್ಯ ಒಂದು ಭಾಗ ಗುಣಮಟ್ಟದ ಆಹಾರ ಸೇವನೆ ಅಗತ್ಯವಿರುತ್ತದೆ. ಹೋಟೆಲ್‌ಗಳು, ಬೇಕರಿ ಇನ್ನಿತರೆ ತಿನಿಸು ಮಾರಾಟ ಮಾಡುವವರು ಉತ್ತಮವಾದ ಆಹಾರ ಪೂರೈಕೆ ಮಾಡಬೇಕು. ಅಗತ್ಯ ಇರುವಷ್ಟು ಮಾತ್ರ ತಯಾರು ಮಾಡಿಕೊಳ್ಳಬೇಕು. ಉಳಿಸಿ ಮತ್ತೆ ಮಾರಾಟ ಮಾಡಬಾರದು ಎಂದರು. ಬಸ್ ನಿಲ್ದಾಣ, ಇತರೆ ಕೆಲವುಕಡೆ ತೆರೆದ ವಾತಾವರಣದಲ್ಲಿ ತಿಂಡಿ, ತಿನಿಸು ಮಾರಾಟ ಮಾಡುವುದನ್ನು ಗಮನಿಸಿದ್ದೇನೆ. ಜನ ಸಂದಣಿ ಪ್ರದೇಶಗಳಲ್ಲಿ ಧೂಳು, ಕ್ರಿಮಿ, ಕೀಟಗಳು ಇರುತ್ತವೆ. ಇವು ಆಹಾರ…

Read More

ಚಿಕ್ಕಮಗಳೂರು: – ಕಾರ್ಮಿಕರಿಗೆ ಎಲ್ಲಾ ರೀತಿಯ ಚಿಕಿತ್ಸೆಗೆ ಒಳಗಾಗಿಸುವ ನಿಟ್ಟಿನಲ್ಲಿ ರಾ ಜ್ಯಸರ್ಕಾರ ಆಧುನಿಕ ತಂತ್ರಜ್ಞಾನ ಹಾಗೂ ಪರಿಣಿತ ವೈದ್ಯರ ತಂಡದೊಂದಿಗೆ ಸಂಚಾರಿ ಆರೋಗ್ಯ ವಾಹನ ವನ್ನು ಶ್ರಮಿಕರಿಗಾಗಿ ಪೂರೈಸಲಾಗಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು. ನಗರದ ಕಾರ್ಮಿಕ ಕಚೇರಿಯಲ್ಲಿ ಮಂಗಳವಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೂತನ ಎರಡು ಸಂಚಾರಿ ಆರೋಗ್ಯ ಘಟಕದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿ ಕಟ್ಟಡ ಕಾರ್ಮಿಕರಿಗೆ ತುರ್ತು ಆರೋಗ್ಯ ಪರಿಸ್ಥಿತಿ ಕಂಡುಬಂದ ಸಂದರ್ಭಗಳಲ್ಲಿ ಸಮೀಪದ ಆಸ್ಪತ್ರೆತೆ ಅಂಬ್ಯೂಲೆನ್ಸ್ ಮಾದರಿಯಲ್ಲಿ ಸೇವೆಯನ್ನು ಒದಗಿಸಿ, ತದನಂತರ ಮಂಡಳಿಯೊಂದಿಗೆ ಸಮನ್ವಯ ಸಾಧಿಸಿ ಕಾರ್ಮಿಕರಿಗೆ ಅಗತ್ಯ ಚಿಕಿತ್ಸೆ ಒದಗಿಸುವ ಜೊತೆಗೆ ಪ್ರತಿ ವಾಹನದಲ್ಲೂ ಎಂಬಿಬಿಎಸ್ ನುರಿತ ವೈದ್ಯರ ತಂಡ ಕಾರ್ಯನಿರ್ವಹಿಸಲಿದೆ ಎಂದರು. ಸಂಚಾರಿ ವಾಹನವು ಜಿಲ್ಲೆಯಾದ್ಯಂತ ಸಂಚರಿಸಿ ರಕ್ತದೊತ್ತಡ, ರಕ್ತಹೀನತೆ, ಅಪೌಷ್ಠಿಕತೆ, ತುರ್ತು ಔಷಧ, ಮೂರ್ಛೆರೋಗ, ಮಧುಮೇಹ, ಬಿಪಿ, ತಾಯಿಯ ಆರೋಗ್ಯ, ನವ ಜನನ ಮತ್ತು ಶಿಶು ಆರೋಗ್ಯ, ದೀರ್ಘಕಾಲದ ಸಂವಹನ ರೋಗಗಳ ನಿರ್ವಹಣೆ,…

Read More

ಚಿಕ್ಕಮಗಳೂರು: ಜನಬಳಕೆಯ ಪದಗಳನ್ನು ತಿಣುಕದೆ ಸುಲಲಿತವಾಗಿ ಬಳಸಿ ಸಾಹಿತ್ಯ ಸೃಷ್ಟಿಸುತ್ತಿದ್ದರಲ್ಲ, ಅದುವೇ ಎಚ್ಚೆಸ್ವಿಯವರ ಕಾವ್ಯ ರಚನೆಯ ದೊಡ್ಡ ಶಕ್ತಿ. ಅದುವೇ ನಾವೆಂದಿಗೂ ಅವರನ್ನು ನೆನಪಿನಂಗಳದಲ್ಲಿ ಸ್ಮರಣೆ ಮಾಡಿಕೊಳ್ಳಲು ಕಾರಣ ಎಂದು ಸಾಹಿತಿ ಡಾ.ಎಚ್.ಎಸ್.ಸತ್ಯನಾರಾಯಣ ಅಭಿಪ್ರಾಯ ವ್ಯಕ್ತಪಡಿಸಿದರು. ಚಿಕ್ಕಮಗಳೂರು ಬ್ರಾಹ್ಮಣ ಮಹಾಸಭಾ, ಪೂರ್ವಿ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್, ಸಾಂಸ್ಕೃತಿಕ ಸಂಘ ಹಾಗೂ ಸುಗಮ ಸಂಗೀತ ಗಂಗಾ ಸಹಯೋಗದಲ್ಲಿ ಭಾನುವಾರ ಸಂಜೆ ನಗರದ ಬ್ರಹ್ಮಸಮುದ್ರ ಶ್ರೀ ರಂಗಣ್ಣನವರ ಛತ್ರದಲ್ಲಿ ಆಯೋಜಿಸಿದ್ದ `ನೆನಪಿನಂಗಳದಲ್ಲಿ ಎಚ್ಚೆಸ್ವಿ’ ಡಾ.ಎಚ್.ಎಸ್.ವೆಂಕಟೇಶಮೂರ್ತಿಯ ಕಾವ್ಯ ಗಾಯನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗೋಪಿಕಾ ಸ್ತ್ರೀಯರಂತೆ ಕೃಷ್ಣನನ್ನು ಪ್ರೀತಿಸಿದವರಿಗೆ ಮಾತ್ರ ಕೃಷ್ಣನ ಮೇಲೆ ಅಷ್ಟೊಂದು ಭಾವ ತೀವ್ರತೆಯಿಂದ ಕಾವ್ಯ ಸೃಷ್ಟಿಸಲು ಸಾಧ್ಯ, ಎಚ್ಚೆಸ್ವಿಯವರ `ಡಿವೈನ್ ಲವ್’ ಆ ರೀತಿಯದು ಎಂದ ಅವರು, ಎಚ್ಚೆಸ್ವಿಯವರ ರಚನೆ `ತೂಗು ಮಂಚದಲ್ಲಿ ಕೂತು.. ಮೇಘ ಶ್ಯಾಮ ರಾಧೆಗಾತು.. ಆಡುತಿರುವನು ಏನೋ ಮಾತು.. ರಾಧೆ ನಾಚುತ್ತಿದ್ದಳು.. ಸೆರಗ ಬೆರಳಿನಲ್ಲಿ ಸುತ್ತಿ, ಜಡೆಯ ತುದಿಯ ಕೆನ್ನೆಗೊತ್ತಿ, ಜುಮ್ಮ ಕೊಡುವ ಮುಖವನೆತ್ತಿ ಕಣ್ಣು…

Read More

ಚಿಕ್ಕಮಗಳೂರು: ಭಾರತ ಕಮ್ಯುನಿಷ್ಟ ಪಕ್ಷ ಸ್ಥಾಪನೆಯಾಗಿ ಇಲ್ಲಿಗೆ ೧೦೦ ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ, ರಾಜ್ಯ, ಜಿಲ್ಲಾ ಸಮ್ಮೇಳನಗಳು ನಡೆಯುತ್ತಿದ್ದು, ಅದಕ್ಕೆ ಪೂರಕವಾಗಿ ಜೂ.೧೮ ರಂದು ನಗರದಲ್ಲಿ ಸಿಪಿಐ ತಾಲೂಕು ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ತಾಲೂಕು ಕಾರ್ಯದರ್ಶಿ ಕೆರೆಮಕ್ಕಿ ರಮೇಶ್ ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸಿಪಿಐ ಕಚೇರಿಯ ಬಿ.ಕೆ.ಸುಂದರೇಶ್ ಸಭಾಂಗಣದಲ್ಲಿ ಅಂದು ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಪ್ರಸ್ತುತ ದೇಶ, ರಾಜ್ಯದ ರಾಜಕೀಯ ಪರಿಸ್ಥಿತಿ ಕುರಿತು ವಿಶ್ಲೇಷಣೆ ನಡೆಯಲಿದೆ. ರಾಜ್ಯ ಮತ್ತು ಕೇಂದ್ರ ಸರಕಾರಗಳು ಜನಸಾಮಾನ್ಯರ ಮೂಲಭೂತ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿವೆ. ದಿನೇ ದಿನೆ ನಿರುದ್ಯೋಗ ಸಮಸ್ಯೆ, ಬಡತನ ವೃದ್ಧಿಯಾಗುತ್ತಿದೆ ಎಂದು ದೂರಿದರು. ಅಗತ್ಯ ವಸ್ತುಗಳು ಹಾಗೂ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಬಡವರು ಮತ್ತು ಶ್ರೀಮಂತರ ಮಧ್ಯೆ ಅಂತರ ತೀವ್ರಗೊಳ್ಳುತ್ತಿದೆ. ಕೂಲಿ ಕಾರ್ಮಿಕರು ಸಂಕಷ್ಟದ ಬದುಕನ್ನು ಕಳೆಯುತ್ತಿದ್ದಾರೆ. ಗುಣಮಟ್ಟದ ಶಿಕ್ಷಣ, ಆರೋಗ್ಯ ಕೈಗೆಟುಕದಂತಾಗಿದೆ. ಬಡವರಿಗೆ ವಾಸಿಸಲು ಮನೆ, ನಿವೇಶನ ಇಲ್ಲ ಈ ಎಲ್ಲ ಸಮಸ್ಯೆಗಳ ಬಗ್ಗೆ ಸಮಾವೇಶದಲ್ಲಿ…

Read More