Subscribe to Updates
Get the latest creative news from FooBar about art, design and business.
- e-paper (22-07-2025) Chikkamagalur Express
- ಪಂಚ ಪೀಠಗಳು ಒಗ್ಗಟ್ಟಾಗಿ ಹೆಜ್ಜೆ ಹಾಕಲಿ : ಶ್ರೀ ರಂಭಾಪುರಿ ಜಗದ್ಗುರುಗಳು
- ನಾಗರೀಕರ ಅರೋಗ್ಯ ಸಮಸ್ಯೆಗೆ ಜ್ಯೋತಿ ಡಯಾಗ್ನಸ್ಟಿಕ್ ಲ್ಯಾಬೋರೇಟರಿ ಪೂರಕ
- e-paper (20-07-2025) Chikkamagalur Express
- ಹಿಂದುತ್ವದ ಬದುಕು ಪ್ರಾಚೀನ ಸಂಸ್ಕೃತಿ-ನಾಗರೀಕತೆಯ ಭಾಗ
- ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ನಗರ ಮಂಡಲ ಪ್ರತಿಭಟನೆ
- ಸರ್ಕಾರ ಬದುಕಿಗೆ ಆದ್ಯತೆ ನೀಡಿ ಮೂಲ ಸೌಕರ್ಯ ಕಲ್ಪಿಸಿದೆ
- e-paper (19-07-2025) Chikkamagalur Express
Author: chikkamagalur express
ಚಿಕ್ಕಮಗಳೂರು: ಕಣ್ಣಿನ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ವೃದ್ದರು ಹಾಗೂ ಯುವ ಪೀಳಿಗೆ ಅತ್ಯಂತ ಕಾಳಜಿ ವಹಿಸುವುದು ಸೂಕ್ತ. ಸಮಯಕ್ಕೆ ತಪಾಸಣೆ ನಡೆಸಿ ಸುರಕ್ಷಿತವಾಗಿ ದೃಷ್ಟಿದೋಷ ದಿಂದ ಮುಕ್ತರಾಗಬೇಕು ಎಂದು ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಅಧ್ಯಕ್ಷ ಡಾ|| ಕೆ.ಸುಂದರಗೌಡ ಹೇಳಿದರು. ನಗರದ ಅಂಡೆಛತ್ರ ಸಮೀಪ ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇಚರ್ ಕನ್ಸರ್‌ವೇಷನ್ ಟ್ರಸ್ಟ್ ಸಹಯೋಗದಲ್ಲಿ ಸಾಯಿ ಡೆಂಟಲ್ ಕೇರ್‌ನಲ್ಲಿ ಭಾನುವಾರ ಏರ್ಪಡಿಸಿದ್ದ ಉಚಿತ ನೇತ್ರ, ದಂತಕ್ಷಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಾಗರೀಕರ ನೇತ್ರ ಹಾಗೂ ದಂತ ಬಗ್ಗೆ ನಿಗಾವಹಿಸುವ ಸಂಬಂಧ ಜಿಲ್ಲೆಯಾದ್ಯಂತ ಸುಮಾರು ೬೦ಕ್ಕೂ ಹೆಚ್ಚು ತಪಾಸಣಾ ಶಿಬಿರ ಆಯೋಜಿಸಿದೆ. ವಯೋಸಹಜದಲ್ಲಿ ಕಣ್ಣಿನ ಪೊರೆಯಿಂದ ಬಳಲುತ್ತಿರುವ ವೃದ್ದ ರು ಅಸಡ್ಡೆ ಮಾಡದೇ ತಪಾಸಣೆ ನಡೆಸಿದರೆ ಪ್ರಾರಂಭದಲ್ಲೇ ಗುಣಮುಖರಾಗಬಹುದು ಎಂದರು. ಕಣ್ಣು ಹಾಗೂ ದಂತ ಮನುಷ್ಯನ ದೇಹದ ಅವಿಭಾಜ್ಯ ಅಂಗಗಳು. ಕಣ್ಣು ಚಲನವಲನದ ಬಗ್ಗೆ ಕ್ಷಣಾ ರ್ಧದಲ್ಲಿ ಮಾಹಿತಿ ನೀಡಿದರೆ, ದಂತಗಳು ಆಹಾರ ಚೆನ್ನಾಗಿ ಅಗಿದು ಜೀರ್ಣಕ್ರಿಯೆಗೆ…
ಚಿಕ್ಕಮಗಳೂರು: ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಶ್ರಮಿಸುವ ಅಂಗನವಾಡಿ ಕಾರ್ಯಕರ್ತೆಯರ ಸೇವೆ ನಿಸ್ವಾರ್ಥವಾದುದು. ಅವರ ಸೇವೆಯನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಚಿಕ್ಕಮಗಳೂರು ಇವರ ವತಿಯಿಂದ ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ವಯೋನಿವೃತ್ತಿ ಹೊಂದಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳು ದೇಶದ ಭವಿಷ್ಯ ಅವರನ್ನು ಉತ್ತಮ ವಾತಾವರಣದಲ್ಲಿ ಬೆಳೆಸಿ ಸಮಾಜದ ಸತ್ಪ್ರಜೆಗಳಾಗಿ ರೂಪಿಸುವುದು ಪ್ರತಿಯೊಬ್ಬ ಪೋಷಕರ ಜವಾಬ್ದಾರಿಯಾಗಿದೆ. ಸರ್ಕಾರವು ಮಕ್ಕಳ ಪಾಲನೆ, ಪೋಷಣೆ, ಶಿಕ್ಷಣ ಹಾಗೂ ಉತ್ತಮ ಬೆಳವಣಿಗೆಗಾಗಿ ಅಂಗನವಾಡಿ ಕೇಂದ್ರಗಳನ್ನು ತೆರೆದಿದ್ದು ಈ ಕೇಂದ್ರಗಳಲ್ಲಿ ಮಕ್ಕಳನ್ನು ಸುರಕ್ಷಿತವಾಗಿ ಮಾತೃ ವಾತ್ಸಲ್ಯದಿಂದ ಪೋಷಣೆ ಮಾಡುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಬಹುಮುಖ್ಯವಾಗಿದೆ ಎಂದರು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಅನೇಕ ಬಡವರ್ಗದ ಜನರು ಇಂದಿಗೂ ಪ್ರತಿ ದಿನ…
ಚಿಕ್ಕಮಗಳೂರು: : ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಸಮಸ್ಯೆಗಳ ಇತ್ಯರ್ಥಕ್ಕೆ ಸಾರ್ವಜನಿಕರು ಹೆಚ್ಚಿನ ಒಲವು ತೋರಿಸಬೇಕು. ಅದರಲ್ಲೂ ಗ್ರಾಮೀಣ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗಪಡೆದುಕೊಳ್ಳುವಂತೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ವೀರಭದ್ರಯ್ಯ ಸಿ. ತಿಳಿಸಿದರು. ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶರ ಕೊಠಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಚಿಕ್ಕಮಗಳೂರು ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಒಳಪಟ್ಟ ಎಲ್ಲಾ ತಾಲ್ಲೂಕು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥವಾಗುವಂತಹ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದರು. ಮದುವೆ ಬಂಧನವನ್ನು ಮುರಿಯುವುದು ನ್ಯಾಯಾಲಯದ ಕೆಲಸವಲ್ಲ, ಅಂತಿಮ ಹಂತದವರೆಗೂ ಪತಿ, ಪತ್ನಿಯರಿಗೆ ಒಟ್ಟಾಗಿ ಜೀವಿಸಲು ತಿಳಿ ಹೇಳಲಾಗುತ್ತದೆ. ಈ ಹಿನ್ನಲೆಯಲ್ಲಿ ಕಳೆದ ಲೋಕ ಅದಾಲತ್‌ನಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇರೆಯಾಗಿದ್ದ ೦೯ ಜೋಡಿಗಳನ್ನು ಒಂದು ಮಾಡಲಾಗಿದೆ ಎಂದು ಹೇಳಿದರು. ಲೋಕ ಅದಾಲತ್‌ನಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ,…
ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಆಡಳಿತ ಮಂಡಳಿ ನೂತನ ಉಪಾಧ್ಯಕ್ಷರಾಗಿ ಹೆಚ್.ಬಿ. ಸತೀಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಬೆಳಗ್ಗೆ ಬ್ಯಾಂಕಿನ ಸಭಾಂಗಣದಲ್ಲಿ ನಡೆದ ಉಪಾಧ್ಯಕ್ಷರ ಚುನಾವಣೆಯಲ್ಲಿ ಯಾವುದೇ ಸ್ಪರ್ಧೆ ಇಲ್ಲದ ಕಾರಣ ಆಡಳಿತ ಮಂಡಳಿಯ ನಿರ್ದೇಶಕರ ಒಮ್ಮತದ ಅಭ್ಯರ್ಥಿಯಾಗಿ ಹೆಚ್.ಬಿ ಸತೀಶ್ ರವರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಉಪ ವಿಭಾಗಾಧಿಕಾರಿ ದಲ್ಜಿತ್‌ಕುಮಾರ್, ಘೋಷಣೆ ಮಾಡಿದರು. ನೂತನ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್. ಸುರೇಶ್, ಬ್ಯಾಂಕಿನ ಆಡಳಿತ ಮಂಡಳಿಯ ಒಮ್ಮತದ ಅಭ್ಯರ್ಥಿಯಾಗಿ ಹೆಚ್.ಬಿ ಸತೀಶ್ ರವರು ಅವಿರೋಧ ಆಯ್ಕೆಯಾಗಿದ್ದು, ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಿ ಎಂದು ಶುಭ ಹಾರೈಸಿದರು. ನಿರ್ದೇಶಕ ಎಂ.ಎಸ್. ನಿರಂಜನ್ ಮಾತನಾಡಿ, ಸಹಕಾರ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರುಗಳು ಪ್ರೀತಿ, ವಿಶ್ವಾಸ, ಒಮ್ಮತದಿಂದ ಆಯ್ಕೆಮಾಡಬೇಕೆಂಬ ನಿರ್ಧಾರಕ್ಕೆ ಬದ್ಧರಾಗಿ ನೂತನ ಉಪಾಧ್ಯಕ್ಷ ಹೆಚ್.ಬಿ ಸತೀಶ್ ಅವರನ್ನು ಅವಿರೋಧ ಆಯ್ಕೆ ಮಾಡಿದ್ದೇವೆ ಎಂದು ಹೇಳಿದರು. ಬಹಳ ವರ್ಷಗಳಿಂದ ಸತೀಶ್ ಅವರು ವಿವಿಧ ಸಹಕಾರ ಸಂಸ್ಥೆಗಳಲ್ಲಿ…
ಚಿಕ್ಕಮಗಳೂರು: ರಾಜ್ಯಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಅನುಷ್ಟಾನಗೊಳಿಸು ವ ಜೊತೆಗೆ ಕ್ಷೇತ್ರದ ಗ್ರಾಮೀಣಾಭಿವೃದ್ದಿ ರಸ್ತೆಗಳಿಗೆ ೧೫ ಕೋಟಿ ಅನುದಾನ ಮೀಸಲಿರಿಸಿ, ಪ್ರತಿ ಗ್ರಾಮ ಪಂಚಾಯಿತಿಗಳಿಗೆ ೪೦ ಲಕ್ಷ ರೂ.ಗಳ ಅನುದಾನವನ್ನು ಹಂಚಿಕೆ ಮಾಡಲಾಗಿದೆ ಎಂದು ಶಾಸಕ ಹೆಚ್.ಡಿ.ತಮ್ಮ ಯ್ಯ ಹೇಳಿದರು. ತಾಲ್ಲೂಕಿನ ಕರ್ತಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕನಕ ಸಮುದಾಯ ಭವನ ಉದ್ಘಾಟನೆ ಹಾಗೂ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಶನಿವಾರ ಅವರು ಮಾತನಾಡಿ ರಾಜ್ಯಸರ್ಕಾರ ಪ್ರತಿ ಕ್ಷೇತ್ರಕ್ಕೂ ೨೫ ಕೋಟಿ ರೂ.ಗಳ ಅನುದಾನವನ್ನು ಒದಗಿಸಿದೆ. ಹಂತ ಹಂತವಾಗಿ ಗ್ರಾಮಾಂತರ ಪ್ರದೇಶದ ನಿವಾಸಿಗಳ ಸವಲತ್ತಿಗೆ ಸಮರ್ಪಕವಾಗಿ ಬಳಸುತ್ತಿದ್ದು ಆ ನಿಟ್ಟಿನಲ್ಲಿ ಗ್ರಾಮದ ಬಹು ಬೇಡಿಕೆಯಾದ ಸಮುದಾಯ ಭವನದ ಅಪೂರ್ಣ ಕಾಮಗಾರಿಯನ್ನು ಪೂರ್ಣಗೊಳಿಸಿ ಗ್ರಾಮಸ್ಥರಿಗೆ ಸಮರ್ಪಿಸಲಾಗಿದೆ ಎಂದರು. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನೇತೃತ್ವದ ರಾಜ್ಯಸರ್ಕಾರ ಗ್ರಾಮೀಣ ಹಾಗೂ ಪಟ್ಟಣದ ನಿವಾಸಿಗಳಿಗೆ ಗ್ಯಾರಂಟಿ ಯೋಜನೆಯನ್ನು ಸಮರ್ಪಕವಾಗಿ ತಲುಪಿಸಿ ನುಡಿದಂತೆ ನಡೆಯುತ್ತಿದೆ. ಅಲ್ಲದೇ ಕ್ಷೇತ್ರ ವ್ಯಾಪ್ತಿಯ ಅಭಿವೃದ್ದಿ ವಿಚಾರದಲ್ಲೂ ಹಿಂದೇಟು…
ಚಿಕ್ಕಮಗಳೂರು: ದಿನನಿತ್ಯದ ಆಹಾರ ಪದ್ಧತಿಯಲ್ಲಿ ಹೆಚ್ಚು ಸಿರಿ ಧಾನ್ಯ ಪದಾರ್ಥಗಳನ್ನು ಬಳಸುವುದರಿಂದ ಅನೇಕ ರೋಗ ರುಜಿನಗಳಿಂದ ಮುಕ್ತರಾಗಿ ಆರೋಗ್ಯವಾಗಿರಲು ಸಾಧ್ಯ ಎಂದು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಚಿಕ್ಕಮಗಳೂರು ಇವರುಗಳ ಸಂಯುಕ್ತಾಶ್ರದಲ್ಲಿ ಇಂದು ನಗರದ ತಾಲ್ಲೂಕು ಕಛೇರಿಯಿಂದ ಜಿಲ್ಲಾಧಿಕಾರಿ ಕಛೇರಿ ಆವರಣದವರೆಗೆ ಆಯೋಜಿಸಿದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನ ಕುರಿತು ಗ್ರಾಹಕರಲ್ಲಿ ಅರಿವು ಮೂಡಿಸುವ ಪ್ರಯುಕ್ತ ಸಿರಿಧಾನ್ಯ ನಡಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ದೇಶದಲ್ಲಿ ಸಿರಿಧಾನ್ಯದ ಮಹತ್ವ ಹೆಚ್ಚುತ್ತಿದೆ. ಭಾರತವು ಸಿರಿಧಾನ್ಯಗಳ ತವರೂರಾಗಿದೆ. ಜಗತ್ತಿನಲ್ಲಿ ಬೆಳೆಯುವ ಸಿರಿಧಾನ್ಯಗಳ ಪೈಕಿ ಶೇ ೪೨ರಷ್ಟು ಸಿರಿಧಾನ್ಯವನ್ನು ನಮ್ಮ ದೇಶದಲ್ಲೇ ಬೆಳೆಯಲಾಗುತ್ತಿದ್ದು, ಸಿರಿಧಾನ್ಯ ಬೆಳೆಯುವಲ್ಲಿ ನಮ್ಮ ರಾಜ್ಯ ಮುಂದಿದೆ ಎಂದು ತಿಳಿಸಿದರು. ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವವರಿಗೆ ಸಿರಿಧಾನ್ಯ ಅತ್ಯುತ್ತಮ ಔಷಧಿಯಾಗಿದೆ ಬಹಳ ಕಡಿಮೆ ನೀರಿನಲ್ಲೂ ಸಿರಿಧಾನ್ಯವನ್ನು ಬೆಳೆಯಬಹುದಾಗಿದೆ. ರೋಗಮುಕ್ತ ಜೀವನಕ್ಕಾಗಿ ಎಲ್ಲರೂ ಸಿರಿ ಧಾನ್ಯಗಳ ಬಳಕೆಗೆ ಮುಂದಾಗಬೇಕು.…
ಚಿಕ್ಕಮಗಳೂರು: ಪೂರ್ವಿಯದ ದಶಮಾನೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪೂರ್ವಿ ಗಾನಯನ-೧೦೧ ರ ಸಂಚಿಕೆಯಡಿ ನಾಡಿನ ಖ್ಯಾತ ಕವಿಗಳ ಕಾವ್ಯ ಗಾಯನದ ನಮ್ಮ ನಾಡು ನಮ್ಮ ಹಾಡು ಕಾರ್ಯಕ್ರಮವನ್ನು ಇದೆ ನ.೧೭ ರಂದು ಭಾನುವಾರ ಸಂಜೆ ೬ ಗಂಟೆಗೆ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಲಾಗಿದೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿ?ಯ ತಿಳಿಸಿದ ಯುರೇಕಾ ಅಕಾಡೆಮಿ ಸಂಸ್ಥಾಪಕ ದೀಪಕ್ ದೊಡ್ಡಯ್ಯ ಪೂರ್ವ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್, ಯುರೇಕಾ ಅಕಾಡೆಮಿ ಇವರುಗಳು ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು. ಅಂದು ಗಾಯನ ಕಾರ್ಯಕ್ರಮದ ಉದ್ಘಾಟನೆಯನ್ನು ಆದಿಚುಂಚನಗಿರಿ ವಿಶ್ವವಿದ್ಯಾನಿಲಯದ ಕುಲ ಸಚಿವ ಡಾಕ್ಟರ್ ಸಿ.ಕೆ.ಸುಬ್ಬರಾಯ ನೆರವೇರಿಸಲಿದ್ದು, ಯುರೇಕಾ ಅಕಾಡೆಮಿಯ ಸಂಸ್ಥಾಪಕರಾದ ದೀಪಕ್ ದೊಡ್ಡಯ್ಯರವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಸುಗಮ ಸಂಗೀತ ಪರಿ?ತ್ ಚಿಕ್ಕಮಗಳೂರು ಘಟಕದ ಅಧ್ಯಕ್ಷರಾದ ಎಸ್.ಎಸ್ ವೆಂಕಟೇಶ್ ತಾಯಿ ಭುವನೇಶ್ವರಿಗೆ ನುಡಿ ನಮನವನ್ನು ಸಲ್ಲಿಸಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾಕ್ಟರ್. ಸಿ.ರಮೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಪೂರ್ವಿಯ ಗಾಯಕರಾದ…
ಚಿಕ್ಕಮಗಳೂರು: ನಗರದ ಟೌನ್ ಮಹಿಳಾ ಸಮಾಜ ವತಿಯಿಂದ ಸಂಸ್ಥಾಪನಾ ದಿನಾಚರಣೆ ೨೦೨೪ ರ ಉದ್ಘಾಟನಾ ಸಮಾರಂಭ ನ.೧೯ ರಂದು ಮಂಗಳವಾರ ನಗರದ ಕುವೆಂಪು ಕಲಾಮಂದಿರದಲ್ಲಿ ಮಧ್ಯಾಹ್ನ ೩ ಗಂಟೆಗೆ ನಡೆಯಲಿದೆ ಎಂದು ಟಿಎಂಎಸ್ ಅಧ್ಯಕ್ಷೆ ಗೀತಾ ಎಂ.ಎಲ್ ಮೂರ್ತಿ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ವಿಶೇಷ ಆಹ್ವಾನಿತರಾಗಿ ಸಂಗೀತ ನಿರ್ದೇಶಕರು ಹಾಗೂ ಚಲನಚಿತ್ರ ನಿರ್ಮಾಪಕರಾದ ಅರ್ಜುನ್ ಜನ್ಯ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹೆಚ್.ಡಿ ತಮ್ಮಯ್ಯ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ, ಎಸ್.ಎಲ್ ಭೋಜೇಗೌಡ, ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್, ಉಪಾಧ್ಯಕ್ಷೆ ಅನುಮಧುಕರ್, ಮಾಜಿ ಶಾಸಕಿ ಗಾಯತ್ರಿ ಶಾಂತೇಗೌಡ, ಅರ್ಪಿತ ಎ.ಎನ್, ಯಮುನಾ ಚನ್ನಬಸಪ್ಪಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆಂದು ಹೇಳಿದರು. ಇದೇ ಸಂದರ್ಭದಲ್ಲಿ ಶಾಂತಬಾಯಿ ಸವೂರ್, ಸಾವಿತ್ರಮ್ಮ ಅಣ್ಣೇಗೌಡ, ಟಿ.ಕೆ ಶಕುಂತಲ, ರಂಗನಾಯಕಮ್ಮ, ಶ್ರೀಮತಿ ಗೌರಮ್ಮ ಬಸವೇಗೌಡ, ಅಂಬುಜ ನಟರಾಜ್ ಇವರುಗಳ ಕುಟುಂಬದವರನ್ನು ಸನ್ಮಾನಿಸುವ ಜೊತೆಗೆ ಸತ್ಯವತಿ ಚಂದ್ರೇಗೌಡ, ಡಾ. ಶಾಂತಿ ಶ್ರೀನಿವಾಸ್, ಕಾತ್ಯಾಯಿನಿ ಚಂದ್ರಶೇಖರ್, ಸುಲೋಚನಾ ಶ್ರೀನಿವಾಸ ಶೆಟ್ಟಿ, ಕೃಷ್ಣವೇಣಿ…