Author: chikkamagalur express

ಚಿಕ್ಕಮಗಳೂರು:  ದೇಶ-ವಿದೇಶಗಳಲ್ಲಿ ಸಾಮಾನ್ಯ ಕ್ರೀಡಾಪಟುಗಿಂತ ವಿಶೇಷ ಚೇತ ನ ಕ್ರೀಡಾಪಟುಗಳು ಹೆಚ್ಚಿನ ಸಾಧನೆಗೈಯುವ ಮೂಲಕ ಯಶಸ್ವಿ ಕ್ರೀಡಾಪಟುವಾಗಿ ಹೊರಹೊಮ್ಮುತ್ತಿದ್ದಾರೆ ಎಂದು ಪ್ರಾಥಮಿಕ ದೈಹಿಕ ಶಿಕ್ಷಣ ಸಂಘದ ಜಿಲ್ಲಾಧ್ಯಕ್ಷ .ಫೈರೋಜ್ ಅಹ್ಮದ್ ಹೇಳಿದರು. ನಗರದ ಸುಭಾಶ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿ.ಪಂ., ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ಧ ವಿಶೇಷ ಚೇತನ ಮಕ್ಕಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸಮಾ ರೋಪ ಸಮಾರಂಭದಲ್ಲಿ ಮಕ್ಕಳಿಗೆ ಬುಧವಾರ ಬಹುಮಾನ ವಿತರಿಸಿ ಅವರು ಮಾತನಾಡಿದರು. ಸಾಮಾನ್ಯ ಮಕ್ಕಳಂತೆ ವಿಶೇಷ ಚೇತನ ಮಕ್ಕಳಿಗೆ ಕ್ರೀಡೆಯಿಂದ ವಂಚಿತರಾಗಬಾರದೆಂಬ ದೃಷ್ಟಿಯಿಂದ ಸರ್ಕಾರ ೧೦೦, ೫೦ ಮೀಟರ್ ಓಟ, ಗುಂಡುಎಸೆತ, ಜಾವಲಿಂಗ್ ಥ್ರೋ ಹಾಗೂ ಉದ್ದಜಿಗಿತ ಕ್ರೀಡೆಗಳನ್ನು ಆಯೋಜಿಸಿ ದೈಹಿಕವಾಗಿ ಸಾಮರ್ಥ್ಯ ತುಂಬಿ ಮಕ್ಕಳಿಗೆ ಅನುಕೂಲ ಕಲ್ಪಿಸುತ್ತಿದೆ ಎಂದು ಹೇಳಿದರು. ತಾಲ್ಲೂಕಿನ ಆಶಾಕಿರಣ ಶಾಲೆಯ ಅನೇಕ ಮಕ್ಕಳು ವಿದೇಶದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನದ ಪದಕವನ್ನು ಗಳಿಸಿದ್ದಾರೆ. ಹೀಗಾಗಿ ವಿಶೇಷ ಚೇತನ ಮಕ್ಕಳು ಮಾನಸಿಕ ಹಾಗೂ ಖಿನ್ನತೆಗೆ ಒಳ ಗಾಗದೇ…

Read More

ಚಿಕ್ಕಮಗಳೂರು: ಸಾಂವಿಧಾನಿಕ ಸಂಸ್ಥೆಗಳನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕಾಗಿ ದುರುಪಯೋಗ ಮಾಡಿಕೊಂಡಿರುವುದನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಮುಖಂಡರುಗಳು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಬಳಿಕ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಬಿಳೇಕಲ್ಲು ಬಾಲಕೃಷ್ಣ ಇಡಿ, ಐಟಿ, ಸಿಬಿಐ ಹಾಗೂ ರಾಜಭವನ, ಚುನಾವಣಾ ಆಯೋಗ, ರಾಜ್ಯಪಾಲರ ಅಧಿಕಾರವನ್ನು ಕೇಂದ್ರ ಸರ್ಕಾರ ೧೦ ವರ್ಷಗಳಲ್ಲಿ ದೇಶದ ಅಖಂಡತೆಗೆ ಧಕ್ಕೆ ತಂದೊಡ್ಡಲು ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಅಪಚಾರ ಎಸಗುತ್ತಿದೆ ಎಂದು ಆರೋಪಿಸಿದರು. ದೇಶದ ಅನೇಕ ರಾಜ್ಯಗಳಲ್ಲಿ ಬಿಜೆಪಿಯೇತರ ಪಕ್ಷದ ಸರ್ಕಾರಗಳು ಜನಾರ್ಶೀವಾದಿಂದ ಆಯ್ಕೆ ಹೊಂದಿ ರಚನೆಗೊಂಡಿದ್ದ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ಮಾಡಿ ಬೇರೆ ಪಕ್ಷದಿಂದ ಆಯ್ಕೆ ಗೊಂಡಿರುವ ಶಾಸಕರನ್ನು ಪುಸಲಾಯಿಸಿ, ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದೆ ಎಂದು ಹೇಳಿದರು. ಸಾಂವಿಧಾನಿಕ ಸಂಸ್ಥೆಗಳನ್ನು ರಾಜಕೀಯ ಲಾಭಕ್ಕಾಗಿ ಕೇಂದ್ರ ಸರ್ಕಾರ ಬಳಸಿಲು ಒತ್ತಡ ಹೇರುವುದು, ತನ್ನ ವ್ಯಾಪ್ತಿಯಲ್ಲಿ ಬರುವ ಅಪರಾಧಗಳ ತನಿಖಾ ಸಂಸ್ಥೆಗಳನ್ನು ರಾಜಕೀಯವಾಗಿ ಬಳಸಿಕೊಂಡು ಜನರಿ ಂದ ಆಯ್ಕೆಗೊಂಡ…

Read More

ಚಿಕ್ಕಮಗಳೂರು: ರಾಜ್ಯ ಸರ್ಕಾರದ ಮಹತ್ವ ಪೂರ್ಣ ಪಂಚಗ್ಯಾರಂಟಿ ಯೋಜನೆಗಳಿಂದ ಸಾಮಾನ್ಯ ಮತ್ತು ಅಸಹಾಯಕ ಕುಟುಂಬಗಳಿಗೆ ವರದಾನವಾಗಿ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಎಂ.ಸಿ. ಶಿವನಂದ ಸ್ವಾಮಿ ಅವರು ಹೇಳಿದ್ದಾರೆ. ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಇಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಿಂದ ಆಯೋಜಿಸಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಅನ್ನಭಾಗ್ಯ ಯೋಜನೆಯಡಿ ಜುಲೈ ೨೦೨೩ ರಿಂದ ಜುಲೈ ೨೦೨೪ ರವರೆಗೆ ಜಿಲ್ಲೆಯಲ್ಲಿ ಒಟ್ಟು ೭,೯೯,೭೮೭ ಫಲಾನುಭವಿಗಳಿಗೆ ಪ್ರತಿ ತಿಂಗಳು ೧೩ ಕೋಟಿಯಂತೆ ಒಟ್ಟು ಇದುವರೆಗೂ ೧೬೫ ಕೋಟಿ  ರೂ. ಗಳ ಸಹಾಯಧನ ನೀಡಲಾಗಿದ್ದು, ಶೇ ೯೮ ರಷ್ಟು ಪ್ರಗತಿ ಆಗಿದೆ ಎಂದ ಅವರು ಶಕ್ತಿ ಯೋಜನೆಯಲ್ಲಿ ಸಾರಿಗೆ ಇಲಾಖೆ ಬಸ್‌ಗಳಲ್ಲಿ ಜಿಲ್ಲೆಯಲ್ಲಿ ಇದುವರೆಗೂ ೨,೯೦,೬೪,೭೫೮ ಮಹಿಳೆಯರು ಪ್ರವಾಸ ಮಾಡಿ ೧೨ ಕೋಟಿ ರೂ. ಗಳು ಈ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಹೇಳಿದರು.…

Read More

ಚಿಕ್ಕಮಗಳೂರು: ಭಾರತ ದೇಶಕ್ಕೆ ಕಾಫಿ ಉದ್ಯಮ ಮತ್ತು ಬೆಳೆಗಾರರ ಬೆವರಿನ ಫಲವಾಗಿ ಅತೀ ಹೆಚ್ಚು ವಿದೇಶಿ ವಿನಿಮಯ ಕೇಂದ್ರ ಸರ್ಕಾರಕ್ಕೆ ಬರುತ್ತಿದ್ದು, ಇದಕ್ಕೆ ಪೂರಕವಾದ ವಾತಾವರಣ ನಿರ್ಮಾಣ ಮಾಡುವ ವ್ಯವಸ್ಥೆಯನ್ನು ಆಡಳಿತ ನಡೆಸುವ ಅಧಿಕಾರಿಗಳು ಜಾರಿಮಾಡಬೇಕು ಎಂದು ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ಮನವಿ ಮಾಡಿದರು. ಅವರು ಇಂದು ನಗರದ ಎಐಟಿ ವೃತ್ತದಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಜಿಲ್ಲೆಯ ಎಲ್ಲಾ ಕಾಫಿ ಬೆಳೆಗಾರರು ಮತ್ತು ಕಾಫಿ ಮಂಡಳಿ ವಿಶೇಷ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ವಲಸೆ ಕಾರ್ಮಿಕರಿಗೆ ಕಾಫಿ ಬೆಳೆಗಾರರು ಸೌಜನ್ಯದಿಂದ ಎಲ್ಲಾ ರೀತಿಯ ಸೌಲಭ್ಯಗಳ ಜೊತೆಗೆ ಕೆಲಸ ಕೊಟ್ಟು ಉತ್ತಮ ವೇತನ ನೀಡಿ ಇಷ್ಟು ವರ್ಷಗಳಿಂದ ಪೋಷಣೆ ಮಾಡಿದ್ದೇವೆ. ಆದರೆ ಹಿಂದೆ ಯಾವುದೇ ಸರ್ಕಾರದ ಪ್ರಾಯೋಜಕತ್ವದ ಸಹಾಯ ಕಾಫಿ ಬೆಳೆಗಾರರಿಗೆ ಇರಲಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಫಿ ಬೆಳೆಗಾರರ ಬದುಕಿಗೆ ಮತ್ತು ಕಾಫಿ ತೋಟಗಳ ನಿರ್ವಹಣೆಗೆ ವಲಸೆ ಕಾರ್ಮಿಕರು ಆಸರೆ ಆಗಿದ್ದರು. ಅದಕ್ಕೆ ನಾವೆಲ್ಲರೂ ಕೊಡುಗೆ ನೀಡಿದ್ದೇವೆ. ಜೊತೆಗೆ ಕಾರ್ಮಿಕರ…

Read More

ಚಿಕ್ಕಮಗಳೂರು: ನಗರದ ಆರೋಗ್ಯ ರಕ್ಷಿಸುವಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವವಾದುದು. ತಮ್ಮ ಕಾಯಕ ನಿಷ್ಠೆಯಿಂದ ಸ್ವಚ್ಛ ಪರಿಸರ ನಿರ್ಮಿಸುತ್ತಿರುವ ಪೌರ ಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ನಗರಸಭೆ ಹಾಗೂ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ವತಿಯಿಂದ ಇಂದು ನಗರಸಭೆ ಕಛೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ ಪ್ರತಿಯೊಂದು ಜೀವಿಗೂ ಆರೋಗ್ಯ ಬಹುಮುಖ್ಯವಾದುದು. ನಮ್ಮ ಸುತ್ತಮುತ್ತಲಿನ ಪರಿಸರ ಹಾಗೂ ಮನೆ ವಾತಾವರಣ ಸ್ವಚ್ಚವಾಗಿರಿಸಿಕೊಂಡರೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಸ್ವಚ್ಛತೆಗೆ ಆದ್ಯತೆ ನೀಡಿ ಸುತ್ತಲಿನ ಪರಿಸರವನ್ನು ಶುಚಿಯಾಗಿರಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ತಮ್ಮ ಮನೆಯ ಸ್ವಚ್ಛತೆ ಜೊತೆಗೆ ನಗರ ಹಾಗೂ ಸಮಾಜದ ಸ್ವಚ್ಛತೆಗೆ ಕಾರಣರಾಗಿರುವ ಪೌರ ಕಾರ್ಮಿಕರು ಆಧುನಿಕ ಸಮಾಜದ ಅವಿಭಾಜ್ಯ ಅಂಗವಾಗಿದ್ದಾರೆ ಎಂದರು. ಸಮಾಜದಲ್ಲಿನ ಪ್ರತಿಯೊಬ್ಬ ವ್ಯಕ್ತಿಯು ತಾನು ಮಾಡುವ ಕಾರ್ಯವನ್ನು ಪ್ರೀತಿಸಬೇಕು. ಕೆಲಸಗಳಲ್ಲಿ ಮೇಲು, ಕೀಳು ಇಲ್ಲ. ಶ್ರದ್ದೆ ನಿಷ್ಠೆಯಿಂದ ಮಾಡಿದ…

Read More

ಚಿಕ್ಕಮಗಳೂರು:  ಶೋಷಿತರು ಮುಂಚೂಣಿಗೆ ಧಾವಿಸುವ ಹಾಗೂ ಅಧಿಕಾರ ಪಡೆ ಯಲಿಚ್ಚಿಸುವ ನಿಟ್ಟಿನಲ್ಲಿ ಅಂಬೇಡ್ಕರ್ ಸಿದ್ಧಾಂತವನ್ನು ಪ್ರತಿಬಿಂಬಿಸುವ ಪಕ್ಷವನ್ನು ಕೈಬಲಪಡಿಸುವುದು ಪ್ರತಿ ಯೊಬ್ಬರ ಧ್ಯೇಯವಾಗಬೇಕು ಎಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಹೇಳಿದರು. ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರ ಸಭೆಯನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿ ದೇಶವನ್ನಾಳಿದ ಎರಡು ರಾಷ್ಟ್ರೀಯ ಪಕ್ಷಗಳ ಕೊಡುಗೆ ಶೂನ್ಯವಾಗಿದೆ. ನೆಹರು ಕಾಲಘಟ್ಟದಿಂದ ಮೋ ದಿ ಕಾಲದವರೆಗೂ ಶೋಷಿತರಿಗೆ ಸ್ಪಂದಿಸುವ ಗುಣ ಬೆಳೆಸಿಕೊಂಡಿಲ್ಲ. ಒಂದೆಡೆ ಬಿಜೆಪಿ ಧರ್ಮಗಳ ನಡುವೆ ವಿಷಬೀಜ ಭಿತ್ತಿದರೆ, ಇನ್ನೊಂದೆಡೆ ಕಾಂಗ್ರೆಸ್ ದಲಿತರ ಮತಕ್ಕಾಗಿ ಓಲೈಕೆ ರಾಜಕಾರಣ ಮಾಡಿ ಅಧಿಕಾರ ಗಿಟ್ಟಿಸಿಕೊಳ್ಳುತ್ತಿದೆ ಎಂದು ದೂರಿದರು. ನೂರಾರು ವರ್ಷಗಳಿಂದ ವಾಸಿಸುತ್ತಿರುವ ಬಹುಜನರಿಗೆ ಇಂದಿಗೂ ಸ್ವಂತ ನಿವೇಶನ, ಭೂಮಿಗಳಿಲ್ಲ. ಕೇಂದ್ರ ಸರ್ಕಾರ ರೈತರಿಗೆ ಸ್ಪಂದಿಸುತ್ತಿಲ್ಲ ಹಾಗೂ ವಿದ್ಯಾವಂತ ಯುವಕರಿಗೆ ಉದ್ಯೋಗ ಒದಗಿಸದಿರುವ ಕಾರಣ ಆತ್ಮಹತ್ಯೆಗೆ ಶರಣಾಗುವ ಸಂಖ್ಯೆ ಹೆಚ್ಚುತ್ತಿದೆ. ಉದ್ಯಮಿಗಳಿಗೆ ಪರೋಕ್ಷವಾಗಿ ಸಾಲಮನ್ನಾ ಮಾಡುವ ಕೇಂದ್ರ ರೈತರಿಗೆ ಬೆಳೆಪರಿಹಾರ ನೀಡದೇ…

Read More

ಚಿಕ್ಕಮಗಳೂರು: ತೇರಾಪಂಥ್ ಧರ್ಮ ಸಂಘದ ಸ್ಥಾಪಕರಾದ ಆಚಾರ್ಯ ಭಿಕ್ಷು ಅವರ ಶಿಷ್ಯರಾದ ಮುನಿಶ್ರಿ ಮೋಹಜಿತ್ ಕುಮಾರ್ ಜೀ ಅವರ ೫೦ನೇ ಧೀಕ್ಷ ಮಹೋತ್ಸವದ ಕಾರ್ಯಕ್ರಮವನ್ನು ನ.೭ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ತೇರಾಪಂಥ್ ಸಭಾದ ಅಧ್ಯಕ್ಷ ಮಹೇಂದ್ರ ಡೋಸಿ ತಿಳಿಸಿದರು. ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಅವರು, ಮುನಿಶ್ರಿ ಮೋಹಜಿತ್ ಕುಮಾರ್ ಜೀ ಅವರು ೧೭ನೇ ವಯಸ್ಸಿನಲ್ಲಿ ಧೀಕ್ಷೆಯನ್ನು ಪಡೆದು ಸ್ವಯಂ ಸನ್ಯಾಸತ್ವ ಜೀವನ ನಡೆಸುತ್ತಿದ್ದಾರೆ. ಆಗಿನ ಪ್ರಧಾನಿಯಾಗಿದ್ದ ಶ್ರೀಮತಿ ಇಂದಿರಾಗಾಂಧಿ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಾಲ್ಕು ಸಂಪ್ರದಾಯಗಳ ಸಮಕ್ಷಮದಲ್ಲಿ ತೇರಾಪಂಥ್ ಧರ್ಮಸಂಘದ ೯ನೇ ಆಚಾರ್ಯರುಗಳಾದ ಆಚಾರ್ಯ ತುಳಸಿರವರ ಹಸ್ತದಿಂದ ಧೀಕ್ಷೆಯನ್ನು ಪಡೆದಿದ್ದರು ಎಂದು ಹೇಳಿದರು. ನ.೭ ಕ್ಕೆ ಧೀಕ್ಷೆಯನ್ನು ಪಡೆದು ೫೦ ವರ್ಷಗಳು ತುಂಬುತ್ತಿರುವ ಈ ಸುವರ್ಣ ಮಹೋತ್ಸವದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ತೇರಾಪಂಥ್ ಧರ್ಮಸಂಘದಿಂದ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.…

Read More

ಚಿಕ್ಕಮಗಳೂರು:  ಕಾಂಗ್ರೆಸ್ ಪಕ್ಷದೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಬಿಜೆಪಿ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಇವರಿಂದ ಪಕ್ಷದ ಕಾರ್ಯಕರ್ತರು, ಮುಖಂಡರ ಆತ್ಮಸ್ಥೈರ್ಯ ಮತ್ತು ಆತ್ಮವಿಶ್ವಾಸ ಕುಗ್ಗಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಹೆಚ್.ಸಿ ಕಲ್ಮರುಡಪ್ಪ ಆರೋಪಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಉಪ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ರಾಜ್ಯಧ್ಯಕ್ಷರ ವಿರುದ್ಧ ಬಾಯಿಗೆ ಬಂದಂತೆ ಮಾಧ್ಯಮಗಳಿಗೆ ಹೇಳಿಕೆಗಳನ್ನು ಬಿಡುಗಡೆ ಮಾಡುತ್ತಿರುವುದರಿಂದ ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತಿದೆ ಎಂದು ದೂರಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರೊಂದಿಗೆ ಅಸಮದಾನವಿದ್ದರೆ ಪಕ್ಷದ ಚೌಕಟ್ಟಿನಲ್ಲಿ ಬಗೆಹರಿಸಿಕೊಳ್ಳಬೇಕು, ಅದನ್ನು ಬಿಟ್ಟು ಪಕ್ಷ ವಿರೋಧಿ ಚಟುವಟಿಕೆ ಹೇಳಿಕೆಗಳನ್ನು ಕೂಡಲೇ ನಿಲ್ಲಿಸುವಂತೆ ಒತ್ತಾಯಿಸಿದ ಅವರು, ಈ ಸಂಬಂಧ ಕೇಂದ್ರ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಎಂದು ಸಲಹೆ ನೀಡಿದರು. ಹೊಂದಾಣಿಕೆ ಬಗ್ಗೆ ಪದೇ ಪದೆ ಹೇಳಿಕೆ ನೀಡುತ್ತಿರುವ ನೀವು ಯಾವುದೇ ನಾಯಕರುಗಳು ಹೊಂದಾಣಿಕೆಯನ್ನು…

Read More

ಚಿಕ್ಕಮಗಳೂರು: : ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಘೋಷಣೆಯೊಂದಿಗೆ ಇಂದು ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ ಎಂದು ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಅಧ್ಯಕ್ಷೆ ರೀನಾ ಸುಜೇಂದ್ರ ತಿಳಿಸಿದರು. ಅವರು ಇಂದು ಒಕ್ಕಲಿಗರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ೦೧-೧೧-೧೯೭೩ ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದ್ದು ಇಂದಿಗ ಸುವರ್ಣ ಮಹೋತ್ಸವ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಇದಕ್ಕೆ ಶ್ರಮಿಸಿದ ಆಲೂರು ವೆಂಕಟರಾಯರು, ಕುವೆಂಪು, ಬಿ.ಎಂ ಶ್ರೀಕಂಠಯ್ಯ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಮುಂತಾದ ಮಹನೀಯರನ್ನು ಇದೇ ಸಂದರ್ಭದಲ್ಲಿ ಸ್ಮರಿಸಿದರು. ಎಲ್ಲರೂ ಒಟ್ಟಾಗಿ ಜಾತಿ, ಮತ, ಬೇಧವಿಲ್ಲದೆ ಕನ್ನಡ ರಾಜ್ಯೋತ್ಸವವನ್ನು ತುಂಬಾ ವಿಜೃಂಭಣೆಯಿಂದ ಆಚರಣೆ ಮಾಡುವುದರ ಜೊತೆಗೆ ಜೈ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ ಎಂಬ ನಾಡಗೀತೆ ಹಾಡುವಾಗ ಮೈ ರೋಮಾಂಚನವಾಗುತ್ತದೆ ಎಂದರು. ಕನ್ನಡ ಬಾವುಟದಲ್ಲಿರುವ ಹಳದಿ ಸಂತೋಷ, ಶಾಂತಿಯನ್ನು ಸೂಚಿಸಿದರೆ, ಕೆಂಪು ಬಣ್ಣ ಧೈರ್ಯವನ್ನು ಸೂಚಿಸುತ್ತದೆ. ಕರ್ನಾಟಕದ ಕ್ರಾಂತಿಕಾರರು ಶಾಂತಿಗೂ ಸಿದ್ಧ-ಕ್ರಾಂತಿಗೂ ಬದ್ಧರಾಗಿದ್ದಾರೆ.…

Read More