Subscribe to Updates
Get the latest creative news from FooBar about art, design and business.
- e-paper (23-07-2025) Chikkamagalur Express
- ಮಳೆಗಾಲ ಮುಗಿದ ಬಳಿಕ ನಗರದ ಎಲ್ಲಾ ರಸ್ತೆಗಳ ಡಾಂಬರೀಕರಣ
- e-paper (22-07-2025) Chikkamagalur Express
- ಪಂಚ ಪೀಠಗಳು ಒಗ್ಗಟ್ಟಾಗಿ ಹೆಜ್ಜೆ ಹಾಕಲಿ : ಶ್ರೀ ರಂಭಾಪುರಿ ಜಗದ್ಗುರುಗಳು
- ನಾಗರೀಕರ ಅರೋಗ್ಯ ಸಮಸ್ಯೆಗೆ ಜ್ಯೋತಿ ಡಯಾಗ್ನಸ್ಟಿಕ್ ಲ್ಯಾಬೋರೇಟರಿ ಪೂರಕ
- e-paper (20-07-2025) Chikkamagalur Express
- ಹಿಂದುತ್ವದ ಬದುಕು ಪ್ರಾಚೀನ ಸಂಸ್ಕೃತಿ-ನಾಗರೀಕತೆಯ ಭಾಗ
- ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ನಗರ ಮಂಡಲ ಪ್ರತಿಭಟನೆ
Author: chikkamagalur express
ಚಿಕ್ಕಮಗಳೂರು: ನಗರದ ಸ್ಪಂದನ ನರ್ಸಿಂಗ್ ಹೋಮ್ ನೆಲಮಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದ್ದು ಆಸ್ಪತ್ರೆ ವೈದ್ಯರು ಸಿಬ್ಬಂದಿಗಳ ಜಾಗೃತಿಯಿಂದ ಯಾವುದೇ ಅನಾಹುತ ನಡೆದಿಲ್ಲ ಆದ್ರೂ ಮುಂಜಾಗ್ರತ ಕ್ರಮವಾಗಿ ನರ್ಸಿಂಗ್ ಹೋಮ್ ರೋಗಿಗಳನ್ನು ಇತರ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿದ್ದ ಸ್ಥಳವನ್ನು ಪರಿಶೀಲಿಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ವಿದ್ಯುತ್ ಕಡಿತಗೊಂಡಿರುವುದರಿಂದ ಆಸ್ಪತ್ರೆ ರೋಗಿಗಳನ್ನು ಸ್ಥಳಾಂತರಿಸುವುದು ಅನಿವಾರ್ಯಾಯಿತೆಂದು ಆಸ್ಪತ್ರೆಯ ವೈದ್ಯರಾದ ಡಾ. ಸಂತೋಷ್ ತಿಳಿಸಿದ್ದಾರೆ ಅಗ್ನಿಶಾಮಕ ಠಾಣೆ ಅಧಿಕಾರಿ ಪ್ರವೀಣ್ ಮಾತನಾಡುತ್ತಾ. ಮುಂಜಾಗ್ರತಾ ಕ್ರಮವಾಗಿ ಕಟ್ಟಡದಲ್ಲಿ ಯಾವುದೇ ಅಗ್ನಿ ಅನಾಹುತ ನಡೆದರೆ ಕಟ್ಟಡದ ಮಾಲೀಕರು ಹಾಗೂ ಸಿಬ್ಬಂದಿಗಳಿಗೆ ತರಬೇತಿಗಳನ್ನು ನೀಡಲಾಗಿರುತ್ತದೆ ಅದನ್ನು ಸ್ಪಂದನ ಆಸ್ಪತ್ರೆಯವರು ಪಡೆದಿರುವುದರಿಂದ ತಕ್ಷಣ ವಿದ್ಯುತ್ ಕಡೆತಗೊಳಿಸಿದ್ದು ಅನಾಹುತ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನರ್ಸಿಂಗ್ ಹೋಮ್ ನಲ್ಲಿದ್ದ ರೋಗಿಗಳನ್ನು ಚಿಕ್ಕಮಗಳೂರು ನಗರದ ಇತರೆ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಗರದಲ್ಲಿ ಒಳ್ಳೆ ಆಸ್ಪತ್ರೆಯಿಂದ ಹೆಸರು ಪಡೆದಿದ್ದ ಸ್ಪಂದನ ಆಸ್ಪತ್ರೆ ಪ್ರಾರಂಭವಾಗಿ ಕೆಲವು ದಿನಗಳಲ್ಲಿ…
ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಮತ್ತು ಗುರುದತ್ತಾತ್ರೇಯ ಬಾಬಾಬುಡನ್ ಗಿರಿ ಭಾಗದ ತಾಣಗಳಲ್ಲಿ ಪ್ರವಾಸಿಗರು ಮತ್ತು ವಾಹನಗಳ ದಟ್ಟಣೆ ನಿಯಂತ್ರಣಕ್ಕೆ ಯೋಜನೆಯೊಂದನ್ನು ರೂಪಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ಅವರು ಶುಕ್ರವಾರ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಮುಳ್ಳಯ್ಯನಗಿರಿಗೆ ಭೇಟಿ ನೀಡಿ ಪರಿಶೀಲಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ಇಲ್ಲಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ವಾಹನ ದಟ್ಟಣೆಯೂ ಹೆಚ್ಚಾಗಿದೆ. ಈಗಾಗಲೇ ತಜ್ಞರು ಇಲ್ಲಿಗೆ ಭೇಟಿ ಮಾಡಿ ಹೆಚ್ಚು ವಾಹನ ಸಂಚಾರದಿಂದ ಭೂ ಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿಗಳಿಗೆ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕರು, ಜಿಲ್ಲಾಧಿಕಾರಿಗಳೊಂದಿಗೆ ಭೇಟಿ ನೀಡಿ ಸ್ಥಳೀಯರು, ಇನ್ನಿತರರ ಅಭಿಪ್ರಾಯ ಕೇಳಿ ನಂತರ ಯಾವ ರೀತಿ ವ್ಯವಸ್ಥೆ ಮಾಡಬಹುದು ಎಂಬುದನ್ನು ತೀರ್ಮಾನಿಸಲು ಸ್ಥಳೀ ಪರಿಶೀಲನೆ ನಡೆಸುತ್ತಿದ್ದೇವೆ ಎಂದರು. ಈ ಭಾಗದಲ್ಲಿ ದಿನವೊಂದಕ್ಕೆ ೬೦೦ ವಾಹನಗಳಿಗೆ ಮಾತ್ರ ಅವಕಾಶ ನೀಡಬಹುದು ಈ ಹಿನ್ನೆಲೆಯಲ್ಲಿ ಪ್ರವಾಸಿಗರ ವಾಹನ ನಿಲುಗಡೆಗೆ ಇಲ್ಲಿ ಬೇಸ್ ಕ್ಯಾಂಪ್ ನಿರ್ಮಿಸಿ ಅಲ್ಲಿಂದ ಜಿಲ್ಲಾಡಳಿತ, ಪ್ರವಾಸೋದ್ಯಮ…
ಚಿಕ್ಕಮಗಳೂರು: ಕನ್ನಡ ಎಂದರೆ ಬರಿ ನುಡಿ ಅಲ್ಲ, ಅದು ಜೀವ, ಭಾವ, ಉಸಿರು ಮತ್ತು ನಮ್ಮ ಹೆಮ್ಮೆ. ಮಹಾಕವಿ ಕುವೆಂಪು ಅವರು ಹೇಳಿದಂತೆ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂಬ ಭಾವನೆ ಕನ್ನಡಿಗರ ಎದೆಯಲ್ಲಿ ಸದಾ ಹಸಿರಾಗಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಕರೆ ನೀಡಿದರು. ಅವರು ಶುಕ್ರವಾರ ನಗರದ ಸುಭಾಶ್ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ ವತಿಯಿಂದ ಏರ್ಪಡಿಸಲಾಗಿದ್ದ ೬೯ ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ ಕರುನಾಡು ಎಂಬ ಪದ ಎತ್ತರದ ಭೂಭಾಗ ಎನ್ನುವ ಅರ್ಥವನ್ನು ನೀಡುತ್ತದೆ. ಕರ್ನಾಟಕದ ಜನತೆ ನಿಜಕ್ಕೂ ಎಲ್ಲಾ ಅರ್ಥದಲ್ಲೂ ಎತ್ತರದ, ಗೌರವದ ಸ್ಥಾನಮಾನಗಳಿಗೆ ಸದಾ ಅರ್ಹರಾಗಿದ್ದಾರೆ. ಮಹಾಕಾವ್ಯಗಳ ರಚನೆಗೆ ಸಂಸ್ಕೃತವನ್ನು ಬಿಟ್ಟು ಕನ್ನಡವನ್ನು ಆಯ್ದುಕೊಂಡ ಕನ್ನಡದ ಧೀಮಂತ ಕವಿಗಳಾದ ಪಂಪ, ಪೊನ್ನ, ರನ್ನರಂತಹ ಮಹಾಕವಿಗಳು ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ್ದಾರೆ. ಕನ್ನಡಕ್ಕೆ ಹೊಸ ಕಾಯಕಲ್ಪ ನೀಡಲು ಶ್ರಮಿಸಿದ ಹಾಗೂ ದೇಶದಲ್ಲೇ ಕನ್ನಡಕ್ಕೇ ಹೆಚ್ಚು ಜ್ಞಾನಪೀಠ ತಂದುಕೊಟ್ಟ ಸಾಹಿತಿಗಳು ಕನ್ನಡಿಗರನ್ನು ತಲೆ…
ಚಿಕ್ಕಮಗಳೂರು: ಭಾರತದ ಧೀಮಂತ ನಾಯಕಿ ಉಕ್ಕಿನ ಮಹಿಳೆ ಎಂದೆ ಕರೆಸಿಕೊಂಡಿದ್ದ ೧೫ ವರ್ಷಗಳ ಕಾಲ ಪ್ರಧಾನಮಂತ್ರಿಗಳಾಗಿದ್ದ ಇಂದಿರಾಗಾಂಧಿ ಅವರ ಪುಣ್ಯ ಸ್ಮರಣೆ ಹಾಗೂ ಭಾರತದ ಉಪ ಪ್ರಧಾನಿಯಾಗಿ ದೇಶದ ೫೫೩ ಸಂಸ್ಥಾನಗಳನ್ನು ಒಗ್ಗೂಡಿಸಿದ ಉಕ್ಕಿನ ಮನುಷ್ಯ ಎಂದೇ ಭಾಜನರಾಗಿದ್ದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನಾಚರಣೆಯನ್ನು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಇಂದು ಆಚರಿಸಲಾಯಿತು. ಕೃಷಿ ಉತ್ಪನ್ನಗಳ ರಪ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್.ಹರೀಶ್ ಮಾತನಾಡಿ, ಪ್ರಿಯದರ್ಶಿನಿ ಇಂದಿರಾಗಾಂಧಿ ಅವರು ಭಾರತಕ್ಕಷ್ಟೇ ಅಲ್ಲದೆ ವಿಶ್ವದ ನಾಯಕಿಯಾಗಿದ್ದರು. ೧೫ ವರ್ಷಗಳ ಕಾಲ ಈ ದೇಶದ ಪ್ರಧಾನಿಯಾಗಿ ಸುಭದ್ರ ದೇಶವನ್ನು ಕಟ್ಟುವಲ್ಲಿ ಮತ್ತು ಶತೃಗಳ ಹೆಡೆಮುರಿ ಕಟ್ಟಿ ಸದೆ ಬಡಿದ ಈ ನಾಯಕಿಯನ್ನು ಅಂದಿನ ವಿರೋಧ ಪಕ್ಷದ ಮುಖಂಡರಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ದುರ್ಗಿ ಎಂದು ಕರೆದಿದ್ದರು ಎಂಬುದನ್ನು ನೆನೆಪಿಸಿಕೊಂಡರು. ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರೂ ಆದ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಇಂದಿರಾಗಾಂಧಿ ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ…
ಚಿಕ್ಕಮಗಳೂರು: ಸಾರ್ವಜನಿಕ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದಾಗ ಸಮಾಜ ಗುರುತಿಸುವ ಜೊತೆಗೆ ಪಕ್ಷದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡ ಪರಿಣಾಮ ಇಂದು ಅಧಿಕಾರದಲ್ಲಿ ಮುಂದುವರೆಯಲು ಕಾರಣವಾಗಿದೆ ಎಂದು ರಾಜ್ಯ ಪರಿಸರ ಮೌಲ್ಯ ಮಾಪನ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಎ.ಎನ್. ಮಹೇಶ್ ತಿಳಿಸಿದರು. ಅವರು ಸವಿತಾ ಸಮಾಜ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ ಉತ್ತಮ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ನೀಡಿರುವ ಈ ಹುದ್ದೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವುದಾಗಿ ತಿಳಿಸಿದ ಅವರು ಸವಿತಾ ಸಮಾಜದ ಮುಖಂಡರು ನನ್ನ ಮೇಲೆ ಇಟ್ಟಿರುವ ಅಭಿಮಾನಕ್ಕೆ ಚಿರಋಣಿಯಾಗಿದ್ದು ಸವಿತಾ ಸಮಾಜದ ಅಭಿವೃದ್ಧಿಗೆ ಸಹಕರಿಸುವುದಾಗಿ ಭರವಸೆ ನೀಡಿದರು. ಸವಿತಾ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಧರ್.ಎನ್ ಮಾತನಾಡಿ ಸವಿತ ಸಮಾಜಕ್ಕೆ ಎ.ಎನ್. ಮಹೇಶ್ ರವರು ಒಂದು ಎಕರೆ ನಿವೇಶನ ನೀಡಿದ್ದು, ಮುಂದಿನ ದಿನಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಇದೇ ರೀತಿಯಲ್ಲಿ ಸಹಕಾರ ನೀಡಿ ಸಮಾಜದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಸವಿತಾ ಸೇವಾ ಟ್ರಸ್ಟ್ ಹಾಗೂ…
ಚಿಕ್ಕಮಗಳೂರು: : ನೂರಾರು ವರ್ಷಗಳಿಂದ ರೈತರು ಸಾಂಪ್ರದಾಹಿಕವಾಗಿ ಕೋಟೆ ಬಡಾವಣೆಯಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ನರಕ ಚತುರ್ದಶಿ ಪ್ರಯುಕ್ತ ಭೂಮಿ ಪೂಜೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಕೋಟೆ ರಂಗನಾಥ್ ಹೇಳಿದರು. ಅವರು ಇಂದು ಕೋಟೆ ಬಡಾವಣೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಲಕ್ಕೆ ಸೋಪ್ಪು ತರುವ ಮೂಲಕ ರೈತರ ಬೆಳೆದ ಕಬ್ಬು, ರಾಗಿ, ಜೋಳ ಮುಂತಾದವುಗಳನ್ನು ಒಂದೆಡೆ ಕಟ್ಟಿಕೊಂಡು, ಕೋಟೆ ಬಡಾವಣೆಯ ಬಾವಿ ಕಟ್ಟೆಗೆ ಬರುತ್ತೇವೆ ಎಂದು ತಿಳಿಸಿದರು. ಈ ಬಾಗದಲ್ಲಿ ಎಂಟು ದೇವಾಲಯಗಳಿದ್ದು ಲಕ್ಕೆ ಇಟ್ಟು ಪೂಜೆ ಸಲ್ಲಿಸಿ ಮನೆಗಳಿಗೆ ಹೋಗಿ ಪಶುಗಳಿಗೆ ತೊಂದರೆ ಆಗದಂತೆ ಹಾಲು, ನೀರು ಎರೆದು ಮನೆಯ ಮೇಲೆ ಇಟ್ಟು ಪೂಜೆ ಸಲ್ಲಿಸುತ್ತೇವೆ ಎಂದರು. ಮುಂದಿನ ಪೀಳಿಗೆಗೆ ಹಬ್ಬಗಳ ಧಾರ್ಮಿಕ ಭಾವನೆಗಳು ಉಳಿಸುವ ನಿಟ್ಟಿನಲ್ಲಿ ಜಾಗೃತಿ-ಅರಿವು ಮೂಡಿಸಲು ದೀಪಾವಳಿ ಹಬ್ಬದಂದು ಸಾಂಪ್ರದಾಯಕ ಪೂಜೆ ಸಲ್ಲಿಸಿ ವಿಧಿ ವಿಧಾನಗಳನ್ನು ಮುಂದುವರೆಸಿಕೊಂಡು ಬರುತ್ತಿದ್ದೇವೆ, ವಿಜೃಂಭಣೆಯಿಂದ ದೀಪಾವಳಿ ಆಚರಿಸಿತ್ತಿರುವ ಜನತೆಗೆ ಶುಭಾಶಯ ಕೋರಿದರು. ಕಾಂಗ್ರೆಸ್ ಮುಖಂಡ ಆನಂದ್ ಮಾತನಾಡಿ…
ಚಿಕ್ಕಮಗಳೂರು: ಯಾವುದೇ ವ್ಯಕ್ತಿ ಸಾರ್ವಜನಿಕ ಬದುಕಿನಲ್ಲಿ ಸಂತೃಪ್ತಿ, ಸಂಸ್ಕಾರ, ಸಾಧನೆ ಮಾಡಿದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ಶುಭ ಹಾರೈಕೆಗಳು, ಆಶೀರ್ವಾದಗಳು ಲಭಿಸುತ್ತವೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಪ್ರವಾಸಿ ಮಂದಿರದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದುತ್ತಿರುವ ಗವಿರಂಗಪ್ಪ ಬಿ.ಹೆಚ್ (ಬಾಣೂರು) ಇವರ ಬೀಳ್ಕೋಡಿಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರಿ ನೌಕರರು ವರ್ಗಾವಣೆ, ನಿವೃತ್ತಿ ಆದಾಗ ಅಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಸಹೋದ್ಯೋಗಿಗಳು ಶುಭ ಹಾರೈಸಿದರೆ ಅವರು ಕರ್ತವ್ಯದಲ್ಲಿ ಹಾಗೂ ಜೀವನದಲ್ಲಿ ಸಂತೃಪ್ತಿ ಸಾಧನೆ ಮಾಡಿದ್ದಾರೆ ಎಂದು ಅರ್ಥ ಎಂದರು. ಸರ್ಕಾರ ಬದಲಾವಣೆ ಆದಾಗ ಲೋಕೋಪಯೋಗಿ ಇಲಾಖೆಯಲ್ಲಿ ಎಇಇ, ಎಕ್ಸಿಕ್ಯೂಟೀವ್ ಇಂಜಿನಿಯರ್ ಉಳಿಯುವ ಸಾಧ್ಯತೆ ಇರುವುದಿಲ್ಲ, ಸರ್ಕಾರ ಬಂದು ೧೮ ತಿಂಗಳಾದರು ಎಇಇ ಗವಿರಂಗಪ್ಪ. ಎಕ್ಸಿಕ್ಯೂಟೀವ್ ಇಂಜಿನಿಯರಿಂಗ್ ಶ್ರೀಧರ್ ಇದೇ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಾರೆ ಎಂಬುವುದಕ್ಕೆ ಎಲ್ಲಾ ಪಕ್ಷದವರ ಮತ್ತು ರಾಜಕೀಯ ಮುಖಂಡರ ಜೊತೆಗೆ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಎಂಬುವುದಕ್ಕೆ ಇದು…
ಚಿಕ್ಕಮಗಳೂರು: ತಾಲೂಕಿನಲ್ಲಿರುವ ಮಾಣಿಕ್ಯಧಾರ ದೇವಿರಮ್ಮ ಬೆಟ್ಟದಲ್ಲಿರುವ ಬಿಂಡಿಗ ದೇವಿರಮ್ಮ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಭಕ್ತರು ಮಾಣಿಕ್ಯಧಾರ ಮಾರ್ಗವಾಗಿ ದೇವಿರಮ್ಮ ಬೆಟ್ಟ ಏರುತ್ತಿದ್ದಾರೆ. ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಬಂದಿದ್ದ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ಮಂಗಳೂರು ಮೂಲದ ಜಯಮ್ಮ (55) ಅಸ್ವಸ್ಥಗೊಂಡ ಮಹಿಳೆ. ಪೊಲೀಸರು ಹಗ್ಗದ ಮೂಲಕ ಮಹಿಳೆಯನ್ನು ರಕ್ಷಣೆ ಮಾಡಿದರು. ಈವರೆಗೆ ಅಸ್ವಸ್ಥಗೊಂಡಿದ್ದ 10ಕ್ಕೂ ಅಧಿಕ ಜನರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಮಲ್ಲೇನಹಳ್ಳಿ ದೇವಿರಮ್ಮನ ದರ್ಶನ ಪಡೆಯಲು ಭಕ್ತಸಾಗರವೇ ಹರಿದು ಬಂದಿದೆ. ಎತ್ತರದ ಬೆಟ್ಟದಲ್ಲಿ ನೆಲೆಸಿರುವ ದೇವಿರಮ್ಮನ ದರ್ಶನ ಪಡೆಯಲು ಪ್ರತಿ ವರ್ಷ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಭಕ್ತರು ಬರಿಗಾಲಲ್ಲಿ ಕಾಡು-ಮೇಡು ಅಲೆದು ದೇವಿಯ ದರ್ಶನ ಪಡೆದು ಪುನೀತರಾಗುತ್ತಾರೆ. ವರ್ಷಕ್ಕೊಮ್ಮೆ ದರ್ಶನ ನೀಡುವ ದೇವಿರಮ್ಮನ ತಾಯಿಯನ್ನ ನೋಡಲು ಈ ವರ್ಷ ನಿರೀಕ್ಷೆಗೂ ಮೀರಿದ ಭಕ್ತವೃಂದ ಆಗಮಿಸುತ್ತಿದೆ. ಪ್ರತಿ ವರ್ಷ 60 ಸಾವಿರಕ್ಕೂ ಅಧಿಕ ಭಕ್ತರು ಬೆಟ್ಟ ಹತ್ತುತ್ತಿದ್ದರು. ಆದರೆ, ಈ ವರ್ಷ ಬುಧವಾರ ಸಂಜೆಯಿಂದ ಈವರೆಗೆ ಬೆಟ್ಟ ಹತ್ತಿದ ಭಕ್ತರ ಸಂಖ್ಯೆ ಲಕ್ಷದ ಗಡಿ ದಾಟಿದೆ. ಪ್ರತಿ ವರ್ಷ ದೀಪಾವಳಿ ನರಕ ಚತುರ್ದಶಿಯ ದಿನ ಬೆಟ್ಟದಲ್ಲಿರುವ ದೇವಿರಮ್ಮನ ದೇವಿಗೆ ವಿಶೇಷ ಪೂಜೆ ನಡೆಯುತ್ತದೆ. ಆ ಪೂಜೆಯನ್ನ ನೋಡಿ ಕಣ್ತುಂಬಿಕೊಳ್ಳಲು ಭಕ್ತರು ಬಿಂಡಿಗ ಗ್ರಾಮಕ್ಕೆ ಅಪಾರ ಭಕ್ತರು ಬರುತ್ತಾರೆ. ಇಲ್ಲಿ ಹರಕೆ ಕಟ್ಟಿದರೆ ಈಡೇರುವುದರಲ್ಲಿ ಅನುಮಾನವಿಲ್ಲ. ಕಲ್ಲು-ಬಂಡೆ, ಮುಳ್ಳುಗಳ ಬೆಟ್ಟದಲ್ಲಿ ಭಕ್ತರು ನರಕ ಚತುದರ್ಶಿ ಹಿಂದಿನ ದಿನ ಸಂಜೆ ನಾಲ್ಕು ಗಂಟೆಯಿಂದಲೇ ಬೆಟ್ಟ ಹತ್ತಲು ಶುರು ಮಾಡಿ ರಾತ್ರೋರಾತ್ರಿ ಕೆಳಗಿಳಿಯುತ್ತಾರೆ. ಬೆಟ್ಟವನ್ನೇರುವಾಗಿ ಕೊಂಚ ಎಡವಿದರೂ ಪಾತಾಳ ಸೇರುವುದು ಗ್ಯಾರಂಟಿ. ಸುರಿಯುವ ಮಳೆಯಲ್ಲೇ ಭಕ್ತರು ಬೆಟ್ಟವನ್ನು ಏರಿ ವರ್ಷದಲ್ಲಿ ಒಮ್ಮೆ ಮಾತ್ರ ದರ್ಶನ ನೀಡುವ ಶಕ್ತಿ ದೇವತೆ ದೇವಿರಮ್ಮ ನನ್ನ ನೋಡಿ ಕಣ್ತುಂಬಿಕೊಳ್ಳುತ್ತಾರೆ. ಸಮುದ್ರಮಟ್ಟದಿಂದ ಸುಮಾರು 3800 ಅಡಿ ಎತ್ತದಲ್ಲಿರೋ ದೇವಿರಮ್ಮನ ಬೆಟ್ಟದಲ್ಲಿ ವರ್ಷಕ್ಕೊಮ್ಮೆ ಮಾತ್ರ ಪೂಜೆ ನಡೆಯುತ್ತದೆ. ವ್ರತದ ಮೂಲಕ ಹರಕೆ ಕಟ್ಟಿ ಉಪವಾಸವಿದ್ದವರು ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಬೆಟ್ಟದಲ್ಲಿ ಸಂಜೆ ದೀಪ ಬೆಳಗಿದ ನಂತರ ಊಟ ಮಾಡುತ್ತಾರೆ. ಭಕ್ತರು ತಂದ ಸೌದೆ, ಎಣ್ಣೆ, ಬೆಣ್ಣೆ, ಸೀರೆ, ರವಕೆಗಳಿಗೆ ಅಗ್ನಿ ಸ್ಪರ್ಶ ಮಾಡಿದ ಬಳಿಕ, ಚಿಕ್ಕಮಗಳೂರಿನ ಸುತ್ತಮುತ್ತಲಿನ ಜನ ಆ ಜ್ಯೋತಿಯನ್ನು ನೋಡಿದ ಆರತಿ ಮಾಡಿ ದೀಪಾವಳಿ ಆಚರಿಸುತ್ತಾರೆ. ಈ ಬೆಟ್ಟದ ತಾಯಿಗೂ ಮೈಸೂರು ಅರಸರಿಗೂ ತೀರಾ ಅವಿನಾಭಾವ ಸಂಬಂಧವಿದೆ. ಪ್ರತಿವರ್ಷ ಮೈಸೂರಿನ ಅರಮನೆಯಿಂದ ಈ ದೇವಾಲಯಕ್ಕೆ ಇಂದಿಗೂ ಎಣ್ಣೆ, ಸೀರೆ, ಅರಿಶಿನ-ಕುಂಕುಮ ಸೇರಿದಂತೆ ಪೂಜೆ ವಸ್ತುಗಳು ಬರುತ್ತವೆ. ಇನ್ನೂ ಬೆಟ್ಟ ಏರುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿದ್ದು ಕಿರಿದಾದ ದುರ್ಗಮ ಮಾರ್ಗದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಭಕ್ತರಿಗೆ ಜಾಗೃತೆಯಿಂದ ಬೆಟ್ಟ ಏರುವಂತೆ ದೇವಸ್ಥಾನ ಆಡಳಿತ ಮಂಡಳಿ ಮನವಿ ಮಾಡಿದೆ. ಒಟ್ಟಾರೆ, ಈ ಬೆಟ್ಟದ ತಾಯಿಯನ್ನ ನೋಡೋಕೆ ಪ್ರತಿವರ್ಷ ರಾಜ್ಯ ಹೊರರಾಜ್ಯದಿಂದಲೂ ಸಾವಿರಾರು ಭಕ್ತರು ಬರುತ್ತಾರೆ. ಇಲ್ಲಿನ ಆಹ್ಲಾದಕರ ವಾತಾವರಣವನ್ನು ಸವಿಯಲು ಬರೋರು ಉಂಟು. ಪ್ರೇಮಿಗಳು ಉಂಟು, ಕಷ್ಟವನ್ನ ಪರಿಹರಿಸೆ ತಾಯಿ…