Subscribe to Updates
Get the latest creative news from FooBar about art, design and business.
- e-paper (24-07-2025) Chikkamagalur Express
- ಬಾಲ್ಯ ವಿವಾಹ ತಡೆಯಲು ಜನಜಾಗೃತಿ ಅಗತ್ಯ
- ಸಂತೆ ಮಾರುಕಟ್ಟೆಯಲ್ಲಿ ಸ್ವಚ್ಛತೆ ಕಾಪಾಡಲು ಸೂಚನೆ
- e-paper (23-07-2025) Chikkamagalur Express
- ಮಳೆಗಾಲ ಮುಗಿದ ಬಳಿಕ ನಗರದ ಎಲ್ಲಾ ರಸ್ತೆಗಳ ಡಾಂಬರೀಕರಣ
- e-paper (22-07-2025) Chikkamagalur Express
- ಪಂಚ ಪೀಠಗಳು ಒಗ್ಗಟ್ಟಾಗಿ ಹೆಜ್ಜೆ ಹಾಕಲಿ : ಶ್ರೀ ರಂಭಾಪುರಿ ಜಗದ್ಗುರುಗಳು
- ನಾಗರೀಕರ ಅರೋಗ್ಯ ಸಮಸ್ಯೆಗೆ ಜ್ಯೋತಿ ಡಯಾಗ್ನಸ್ಟಿಕ್ ಲ್ಯಾಬೋರೇಟರಿ ಪೂರಕ
Author: chikkamagalur express
ಚಿಕ್ಕಮಗಳೂರು: : ನೂರಾರು ವರ್ಷಗಳಿಂದ ರೈತರು ಸಾಂಪ್ರದಾಹಿಕವಾಗಿ ಕೋಟೆ ಬಡಾವಣೆಯಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ನರಕ ಚತುರ್ದಶಿ ಪ್ರಯುಕ್ತ ಭೂಮಿ ಪೂಜೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಕೋಟೆ ರಂಗನಾಥ್ ಹೇಳಿದರು. ಅವರು ಇಂದು ಕೋಟೆ ಬಡಾವಣೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಲಕ್ಕೆ ಸೋಪ್ಪು ತರುವ ಮೂಲಕ ರೈತರ ಬೆಳೆದ ಕಬ್ಬು, ರಾಗಿ, ಜೋಳ ಮುಂತಾದವುಗಳನ್ನು ಒಂದೆಡೆ ಕಟ್ಟಿಕೊಂಡು, ಕೋಟೆ ಬಡಾವಣೆಯ ಬಾವಿ ಕಟ್ಟೆಗೆ ಬರುತ್ತೇವೆ ಎಂದು ತಿಳಿಸಿದರು. ಈ ಬಾಗದಲ್ಲಿ ಎಂಟು ದೇವಾಲಯಗಳಿದ್ದು ಲಕ್ಕೆ ಇಟ್ಟು ಪೂಜೆ ಸಲ್ಲಿಸಿ ಮನೆಗಳಿಗೆ ಹೋಗಿ ಪಶುಗಳಿಗೆ ತೊಂದರೆ ಆಗದಂತೆ ಹಾಲು, ನೀರು ಎರೆದು ಮನೆಯ ಮೇಲೆ ಇಟ್ಟು ಪೂಜೆ ಸಲ್ಲಿಸುತ್ತೇವೆ ಎಂದರು. ಮುಂದಿನ ಪೀಳಿಗೆಗೆ ಹಬ್ಬಗಳ ಧಾರ್ಮಿಕ ಭಾವನೆಗಳು ಉಳಿಸುವ ನಿಟ್ಟಿನಲ್ಲಿ ಜಾಗೃತಿ-ಅರಿವು ಮೂಡಿಸಲು ದೀಪಾವಳಿ ಹಬ್ಬದಂದು ಸಾಂಪ್ರದಾಯಕ ಪೂಜೆ ಸಲ್ಲಿಸಿ ವಿಧಿ ವಿಧಾನಗಳನ್ನು ಮುಂದುವರೆಸಿಕೊಂಡು ಬರುತ್ತಿದ್ದೇವೆ, ವಿಜೃಂಭಣೆಯಿಂದ ದೀಪಾವಳಿ ಆಚರಿಸಿತ್ತಿರುವ ಜನತೆಗೆ ಶುಭಾಶಯ ಕೋರಿದರು. ಕಾಂಗ್ರೆಸ್ ಮುಖಂಡ ಆನಂದ್ ಮಾತನಾಡಿ…
ಚಿಕ್ಕಮಗಳೂರು: ಯಾವುದೇ ವ್ಯಕ್ತಿ ಸಾರ್ವಜನಿಕ ಬದುಕಿನಲ್ಲಿ ಸಂತೃಪ್ತಿ, ಸಂಸ್ಕಾರ, ಸಾಧನೆ ಮಾಡಿದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ಶುಭ ಹಾರೈಕೆಗಳು, ಆಶೀರ್ವಾದಗಳು ಲಭಿಸುತ್ತವೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಅಭಿಪ್ರಾಯಿಸಿದರು. ಅವರು ಪ್ರವಾಸಿ ಮಂದಿರದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದುತ್ತಿರುವ ಗವಿರಂಗಪ್ಪ ಬಿ.ಹೆಚ್ (ಬಾಣೂರು) ಇವರ ಬೀಳ್ಕೋಡಿಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರಿ ನೌಕರರು ವರ್ಗಾವಣೆ, ನಿವೃತ್ತಿ ಆದಾಗ ಅಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಸಹೋದ್ಯೋಗಿಗಳು ಶುಭ ಹಾರೈಸಿದರೆ ಅವರು ಕರ್ತವ್ಯದಲ್ಲಿ ಹಾಗೂ ಜೀವನದಲ್ಲಿ ಸಂತೃಪ್ತಿ ಸಾಧನೆ ಮಾಡಿದ್ದಾರೆ ಎಂದು ಅರ್ಥ ಎಂದರು. ಸರ್ಕಾರ ಬದಲಾವಣೆ ಆದಾಗ ಲೋಕೋಪಯೋಗಿ ಇಲಾಖೆಯಲ್ಲಿ ಎಇಇ, ಎಕ್ಸಿಕ್ಯೂಟೀವ್ ಇಂಜಿನಿಯರ್ ಉಳಿಯುವ ಸಾಧ್ಯತೆ ಇರುವುದಿಲ್ಲ, ಸರ್ಕಾರ ಬಂದು ೧೮ ತಿಂಗಳಾದರು ಎಇಇ ಗವಿರಂಗಪ್ಪ. ಎಕ್ಸಿಕ್ಯೂಟೀವ್ ಇಂಜಿನಿಯರಿಂಗ್ ಶ್ರೀಧರ್ ಇದೇ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಾರೆ ಎಂಬುವುದಕ್ಕೆ ಎಲ್ಲಾ ಪಕ್ಷದವರ ಮತ್ತು ರಾಜಕೀಯ ಮುಖಂಡರ ಜೊತೆಗೆ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದಾರೆ ಎಂಬುವುದಕ್ಕೆ ಇದು…
ಚಿಕ್ಕಮಗಳೂರು: ತಾಲೂಕಿನಲ್ಲಿರುವ ಮಾಣಿಕ್ಯಧಾರ ದೇವಿರಮ್ಮ ಬೆಟ್ಟದಲ್ಲಿರುವ ಬಿಂಡಿಗ ದೇವಿರಮ್ಮ ದರ್ಶನಕ್ಕೆ ಭಕ್ತ ಸಾಗರ ಹರಿದು ಬರುತ್ತಿದೆ. ಭಕ್ತರು ಮಾಣಿಕ್ಯಧಾರ ಮಾರ್ಗವಾಗಿ ದೇವಿರಮ್ಮ ಬೆಟ್ಟ ಏರುತ್ತಿದ್ದಾರೆ. ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಬಂದಿದ್ದ ಮಹಿಳೆ ಅಸ್ವಸ್ಥಗೊಂಡಿದ್ದಾರೆ. ಮಂಗಳೂರು ಮೂಲದ ಜಯಮ್ಮ (55) ಅಸ್ವಸ್ಥಗೊಂಡ ಮಹಿಳೆ. ಪೊಲೀಸರು ಹಗ್ಗದ ಮೂಲಕ ಮಹಿಳೆಯನ್ನು ರಕ್ಷಣೆ ಮಾಡಿದರು. ಈವರೆಗೆ ಅಸ್ವಸ್ಥಗೊಂಡಿದ್ದ 10ಕ್ಕೂ ಅಧಿಕ ಜನರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆ್ಯಂಬುಲೆನ್ಸ್ಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಮಲ್ಲೇನಹಳ್ಳಿ ದೇವಿರಮ್ಮನ ದರ್ಶನ ಪಡೆಯಲು ಭಕ್ತಸಾಗರವೇ ಹರಿದು ಬಂದಿದೆ. ಎತ್ತರದ ಬೆಟ್ಟದಲ್ಲಿ ನೆಲೆಸಿರುವ ದೇವಿರಮ್ಮನ ದರ್ಶನ ಪಡೆಯಲು ಪ್ರತಿ ವರ್ಷ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಭಕ್ತರು ಬರಿಗಾಲಲ್ಲಿ ಕಾಡು-ಮೇಡು ಅಲೆದು ದೇವಿಯ ದರ್ಶನ ಪಡೆದು ಪುನೀತರಾಗುತ್ತಾರೆ. ವರ್ಷಕ್ಕೊಮ್ಮೆ ದರ್ಶನ ನೀಡುವ ದೇವಿರಮ್ಮನ ತಾಯಿಯನ್ನ ನೋಡಲು ಈ ವರ್ಷ ನಿರೀಕ್ಷೆಗೂ ಮೀರಿದ ಭಕ್ತವೃಂದ ಆಗಮಿಸುತ್ತಿದೆ. ಪ್ರತಿ ವರ್ಷ 60 ಸಾವಿರಕ್ಕೂ ಅಧಿಕ ಭಕ್ತರು ಬೆಟ್ಟ ಹತ್ತುತ್ತಿದ್ದರು. ಆದರೆ, ಈ ವರ್ಷ ಬುಧವಾರ ಸಂಜೆಯಿಂದ ಈವರೆಗೆ ಬೆಟ್ಟ ಹತ್ತಿದ ಭಕ್ತರ ಸಂಖ್ಯೆ ಲಕ್ಷದ ಗಡಿ ದಾಟಿದೆ. ಪ್ರತಿ ವರ್ಷ ದೀಪಾವಳಿ ನರಕ ಚತುರ್ದಶಿಯ ದಿನ ಬೆಟ್ಟದಲ್ಲಿರುವ ದೇವಿರಮ್ಮನ ದೇವಿಗೆ ವಿಶೇಷ ಪೂಜೆ ನಡೆಯುತ್ತದೆ. ಆ ಪೂಜೆಯನ್ನ ನೋಡಿ ಕಣ್ತುಂಬಿಕೊಳ್ಳಲು ಭಕ್ತರು ಬಿಂಡಿಗ ಗ್ರಾಮಕ್ಕೆ ಅಪಾರ ಭಕ್ತರು ಬರುತ್ತಾರೆ. ಇಲ್ಲಿ ಹರಕೆ ಕಟ್ಟಿದರೆ ಈಡೇರುವುದರಲ್ಲಿ ಅನುಮಾನವಿಲ್ಲ. ಕಲ್ಲು-ಬಂಡೆ, ಮುಳ್ಳುಗಳ ಬೆಟ್ಟದಲ್ಲಿ ಭಕ್ತರು ನರಕ ಚತುದರ್ಶಿ ಹಿಂದಿನ ದಿನ ಸಂಜೆ ನಾಲ್ಕು ಗಂಟೆಯಿಂದಲೇ ಬೆಟ್ಟ ಹತ್ತಲು ಶುರು ಮಾಡಿ ರಾತ್ರೋರಾತ್ರಿ ಕೆಳಗಿಳಿಯುತ್ತಾರೆ. ಬೆಟ್ಟವನ್ನೇರುವಾಗಿ ಕೊಂಚ ಎಡವಿದರೂ ಪಾತಾಳ ಸೇರುವುದು ಗ್ಯಾರಂಟಿ. ಸುರಿಯುವ ಮಳೆಯಲ್ಲೇ ಭಕ್ತರು ಬೆಟ್ಟವನ್ನು ಏರಿ ವರ್ಷದಲ್ಲಿ ಒಮ್ಮೆ ಮಾತ್ರ ದರ್ಶನ ನೀಡುವ ಶಕ್ತಿ ದೇವತೆ ದೇವಿರಮ್ಮ ನನ್ನ ನೋಡಿ ಕಣ್ತುಂಬಿಕೊಳ್ಳುತ್ತಾರೆ. ಸಮುದ್ರಮಟ್ಟದಿಂದ ಸುಮಾರು 3800 ಅಡಿ ಎತ್ತದಲ್ಲಿರೋ ದೇವಿರಮ್ಮನ ಬೆಟ್ಟದಲ್ಲಿ ವರ್ಷಕ್ಕೊಮ್ಮೆ ಮಾತ್ರ ಪೂಜೆ ನಡೆಯುತ್ತದೆ. ವ್ರತದ ಮೂಲಕ ಹರಕೆ ಕಟ್ಟಿ ಉಪವಾಸವಿದ್ದವರು ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಬೆಟ್ಟದಲ್ಲಿ ಸಂಜೆ ದೀಪ ಬೆಳಗಿದ ನಂತರ ಊಟ ಮಾಡುತ್ತಾರೆ. ಭಕ್ತರು ತಂದ ಸೌದೆ, ಎಣ್ಣೆ, ಬೆಣ್ಣೆ, ಸೀರೆ, ರವಕೆಗಳಿಗೆ ಅಗ್ನಿ ಸ್ಪರ್ಶ ಮಾಡಿದ ಬಳಿಕ, ಚಿಕ್ಕಮಗಳೂರಿನ ಸುತ್ತಮುತ್ತಲಿನ ಜನ ಆ ಜ್ಯೋತಿಯನ್ನು ನೋಡಿದ ಆರತಿ ಮಾಡಿ ದೀಪಾವಳಿ ಆಚರಿಸುತ್ತಾರೆ. ಈ ಬೆಟ್ಟದ ತಾಯಿಗೂ ಮೈಸೂರು ಅರಸರಿಗೂ ತೀರಾ ಅವಿನಾಭಾವ ಸಂಬಂಧವಿದೆ. ಪ್ರತಿವರ್ಷ ಮೈಸೂರಿನ ಅರಮನೆಯಿಂದ ಈ ದೇವಾಲಯಕ್ಕೆ ಇಂದಿಗೂ ಎಣ್ಣೆ, ಸೀರೆ, ಅರಿಶಿನ-ಕುಂಕುಮ ಸೇರಿದಂತೆ ಪೂಜೆ ವಸ್ತುಗಳು ಬರುತ್ತವೆ. ಇನ್ನೂ ಬೆಟ್ಟ ಏರುವ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿದ್ದು ಕಿರಿದಾದ ದುರ್ಗಮ ಮಾರ್ಗದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಭಕ್ತರಿಗೆ ಜಾಗೃತೆಯಿಂದ ಬೆಟ್ಟ ಏರುವಂತೆ ದೇವಸ್ಥಾನ ಆಡಳಿತ ಮಂಡಳಿ ಮನವಿ ಮಾಡಿದೆ. ಒಟ್ಟಾರೆ, ಈ ಬೆಟ್ಟದ ತಾಯಿಯನ್ನ ನೋಡೋಕೆ ಪ್ರತಿವರ್ಷ ರಾಜ್ಯ ಹೊರರಾಜ್ಯದಿಂದಲೂ ಸಾವಿರಾರು ಭಕ್ತರು ಬರುತ್ತಾರೆ. ಇಲ್ಲಿನ ಆಹ್ಲಾದಕರ ವಾತಾವರಣವನ್ನು ಸವಿಯಲು ಬರೋರು ಉಂಟು. ಪ್ರೇಮಿಗಳು ಉಂಟು, ಕಷ್ಟವನ್ನ ಪರಿಹರಿಸೆ ತಾಯಿ…
ಚಿಕ್ಕಮಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣಾ ಕಾರ್ಯವನ್ನು ಕೈಗೊಂಡು ಅಕ್ಟೋಬರ್ ೨೯ ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕ ರಡ್ಡಿ ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ವಿವಿಧ ರಾಜಕೀಯ ಪಕ್ಷಗಳ ಮುಖಾಂತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಭಾರತ ಚುನಾವಣಾ ಆಯೋಗವು ಪ್ರತಿ ವರ್ಷ ಜನವರಿ ೦೧ ನ್ನು ಅರ್ಹತಾ ದಿನಾಂಕವಾಗಿ ನಿಗಧಿಪಡಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಕಾರ್ಯವನ್ನು ಕೈಗೊಳ್ಳಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದರು. ಅಕ್ಟೋಬರ್ ೨೯ ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ನವೆಂಬರ್ ೨೮ ರವರೆಗೆ ಸರಿಪಡಿಸಿಕೊಳ್ಳಲು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ನವೆಂಬರ್ ೦೯, ೧೦, ೨೩ ಮತ್ತು ೨೪ ರಂದು ಮನವಿ, ಆಕ್ಷೇಪಣೆಗಳ ಸರಿಪಡಿಸುವ ಕಾರ್ಯ ನಡೆಯಲಿದ್ದು, ೨೦೨೫ ಜನವರಿ ೦೬ ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ…
ಚಿಕ್ಕಮಗಳೂರು: ಸ್ಪರ್ಧಾತ್ಮಕ ಪರೀಕ್ಷೆಗಳು ಸಮಾಜದ ಉನ್ನತ ಸ್ಥಾನ ತಲುಪಲು ಸಹಕಾರಿಯಾಗಿದೆ. ಪ್ರತಿಯೊಬ್ಬರು ಕಲಿಕೆ ಹಾಗೂ ಸತತ ಪ್ರಯತ್ನಗಳ ಮೂಲಕ ತಮ್ಮ ಗುರಿ ಸಾಧಿಸಬಹುದು ಎಂದು ಚಿಕ್ಕಮಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹೆಚ್.ಡಿ ತಮ್ಮಯ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಇನ್ಸೈಟ್ ಅಕಾಡೆಮಿ ಬೆಂಗಳೂರು, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಐ.ಟಿ.ಡಿ.ಪಿ ಇಲಾಖೆ ವತಿಯಿಂದ ಇಂದು ನಗರದ ಎ.ಐ.ಟಿ ಕಾಲೇಜು ಬಿಜಿಎಸ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿನಿಲಯಗಳ ನಿಲಯಾರ್ಥಿಗಳಿಗೆ ಐ.ಎ.ಎಸ್, ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿಯು ಸಮಾಜದಲ್ಲಿನ ಗೌರವಯುತವಾದ ಹುದ್ದೆಗೆ ತಲುಪಿ ಸೇವೆ ಸಲ್ಲಿಸಬೇಕೆಂಬ ಗುರಿಯನ್ನು ಹೊಂದಿರುತ್ತಾರೆ. ಬಡತನ ಹಾಗೂ ಉತ್ತಮ ಮಾರ್ಗದರ್ಶಕರ ಕೊರತೆಯಿಂದ ಗುರಿ ತಲುಪುವಲ್ಲಿ ವಿಫಲರಾಗುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ಜೊತೆಗೆ ಮಾರ್ಗದರ್ಶನ ನೀಡಿ ಅವರನ್ನು ಪ್ರೋತ್ಸಾಹಿಸುವುದು ಅವಶ್ಯಕವಾಗಿದೆ ಎಂದರು. ಜಿಲ್ಲೆಯ ವಿವಿಧ ಗ್ರಾಮಗಳಿಂದ ಕನಸುಗಳ ಹೊತ್ತು ವಿದ್ಯಾರ್ಥಿ ನಿಲಯಗಳಲ್ಲಿದ್ದು…
ಚಿಕ್ಕಮಗಳೂರು: ರೈತರ ಕೃಷಿ ಭೂಮಿಯನ್ನು ಇತರೆ ಉದ್ದೇಶಗಳಿಗೆ ಅನ್ಯಕ್ರಾಂತ ಮಾಡಲು ಅರಣ್ಯ ಇಲಾಖೆಯಿಂದ ನಿರಾಪೇಕ್ಷಣಾ ಪ್ರಮಾಣ ಪತ್ರ ಪಡೆಯಬೇಕೆಂಬ ನೂತನ ನಿಯಮವನ್ನು ಸರ್ಕಾರ ಕೂಡಲೇ ವಾಪಾಸ್ ಪಡೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಆಗ್ರಹಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರೈತರ ಕೃಷಿಭೂಮಿಯನ್ನು ಅನ್ಯ ಉದ್ದೇಶಕ್ಕೆ ಭೂಪರಿವರ್ತನೆ ಮಾಡುವಾಗ ಸ್ವಂತ ಕಟ್ಟಡ ಕಟ್ಟಲು ಕಂದಾಯ ಇಲಾಖೆ, ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಂದ ನಿರಾಪೇಕ್ಷಣಾ ಪ್ರಮಾಣಪತ್ರ ಪಡೆಯಲಾಗುತ್ತಿದ್ದು, ಈಗ ಹೊಸದಾಗಿ ಅರಣ್ಯ ಇಲಾಖೆಯಿಂದ ನಿರಾಪೇಕ್ಷಣಾ ಪತ್ರ ಪಡೆಯಬೇಕೆಂಬುದು ರೈತರಿಗೆ ಸಂಕಷ್ಟ ತಂದೊಡ್ಡಿದೆ ಎಂದು ಆರೋಪಿಸಿದರು. ಪಹಣಿ, ಮ್ಯೂಟೇಷನ್ ಸೇರಿದಂತೆ ಭೂಮಿಗೆ ಸೇರಿದ ಎಲ್ಲಾ ದಾಖಲೆಗಳು ಕಂದಾಯ ಇಲಾಖೆಯಲ್ಲಿ ಲಭ್ಯವಿದ್ದು, ಕಂದಾಯ ಇಲಾಖೆಗೆ ಸೇರಿದ ಜಮೀನಾಗಲೀ, ಅರಣ್ಯ ಇಲಾಖೆಗೆ ಸೇರಿದ ಭೂಮಿಯಾಗಲಿ ಪಹಣಿ ಮ್ಯೂಟೇಷನ್ ಖಾತೆ ಮಾಡಿ ದಾಖಲಿಸುವ ಜವಾಬ್ದಾರಿ ಹಾಗೂ ದಾಖಲೆಗಳನ್ನು ಕಾಪಾಡುವ ಕರ್ತವ್ಯ ಕಂದಾಯ ಇಲಾಖೆಗೆ ಸೇರಿರುವುದರಿಂದ ಭೂದಾಖಲೆಗಳು ಡಿಜಿಟಲೀಕರಣವಾಗಿದೆ ಎಂದು ಸರ್ಕಾರದ ಸಚಿವರು…
ಚಿಕ್ಕಮಗಳೂರು: ಮುಂದಿನ ೧೦ ವರ್ಷದಲ್ಲಿ ಕಾಫಿ ಉದ್ಯಮವನ್ನು ಉಳಿಸಲು ಹಲವಾರು ಬದಲಾವಣೆಗಳನ್ನು ತರುವ ಮೂಲಕ ೧೭ ವಿವಿಧ ಸಮಿತಿಗಳನ್ನು ರಚಿಸಿದ್ದು, ೩೧೬ ಸದಸ್ಯರು ಕಾಫಿ ಗುಣಮಟ್ಟ ಹಾಗೂ ಸ್ಥಳೀಯವಾಗಿ ಕಾಫಿ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಲಿದ್ದಾರೆ ಎಂದು ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವರುಂದ ತಿಳಿಸಿದರು. ಅವರು ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಮಹಿಳಾ ಜಿಲ್ಲಾ ಒಕ್ಕಲಿಗರ ಸಂಘ ಏರ್ಪಡಿಸಿದ್ದ ತಿಂಗಳ ಅತಿಥಿ ಕಾರ್ಯಕ್ರಮದಲ್ಲಿ ಕಾಫಿ ಮಂಡಳಿಯಿಂದ ಗುಣಮಟ್ಟದ ಕಾಫಿ ತಯಾರಿಸುವ ಬಗ್ಗೆ ಮಾಹಿತಿ ನೀಡಿದರು. ಪ್ರಸ್ತುತ ಪ್ರಪಂಚ ಬದಲಾವಣೆ ಕಾಣುತ್ತಿದ್ದು, ಯುವಕರು ಕಾಫಿ ಉದ್ಯಮಕ್ಕೆ ಆಗಮಿಸುತ್ತಿದ್ದಾರೆ. ಆದರೆ ಬೆಳಗಾರರು ಬರುತ್ತಿಲ್ಲ ಎಂದು ವಿ?ಧಿಸಿದ ಅವರು, ಭಾರತದಲ್ಲಿ ಕಾಫಿ ಉದ್ಯಮಕ್ಕೆ ಭವ್ಯ ಭವಿ?ದ ದೃಷ್ಟಿಯಿಂದ ಬೇರೆ ಬೇರೆ ರಾಜ್ಯಗಳ ಯುವಕರು ಕಲಿಕೆ ಆರಂಭಿಸಿದ್ದಾರೆ ಎಂದರು. ರತನ್ ಟಾಟಾ ಕಾಫಿ ಉದ್ಯಮ ಸ್ಥಾಪಿಸಿ ಅನೇಕರಿಗೆ ಉದ್ಯೋಗ ನೀಡಿ ಕಾಫಿ ಬೆಳಗಾರರಿಗೆ ಉತ್ತೇಜನ ನೀಡಿದ್ದಾರೆ ನಟ ಪುನೀತ್ ರಾಜಕುಮಾರ್ ಸಹ ಸಮಾಜ…
ಚಿಕ್ಕಮಗಳೂರು: ಆಯುರ್ವೇದ ಔಷಧ ಪದ್ಧತಿಯು ಮನುಕುಲದ ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್ ಎಸ್ ಕೀರ್ತನಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಧನ್ವಂತರಿ ಜಯಂತಿ ದಿನದ ಅಂಗವಾಗಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ೯ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಯುರ್ವೇದ ಔಷಧ ಪದ್ಧತಿಯು ಭಾರತದ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಯಾಗಿದೆ. ಇದು ನೈಸರ್ಗಿಕ ಪರಿಹಾರಗಳು, ಜೀವನಶೈಲಿಯ ಬದಲಾವಣೆಗಳು ಮತ್ತು ಆರೋಗ್ಯಕರ ಆಹಾರದ ಮೂಲಕ ದೇಹ, ಮನಸ್ಸು ಮತ್ತು ಆತ್ಮವನ್ನು ಸಮತೋಲನಗೊಳಿಸುವ ಕಲ್ಪನೆಯನ್ನು ಆಧರಿಸಿದೆ ಎಂದರು. ಪ್ರತಿಯೊಬ್ಬ ಮನುಷ್ಯನಿಗೂ ಉತ್ತಮ ಆರೋಗ್ಯ ಬಹುಮುಖ್ಯವಾಗಿದೆ. ಆರೋಗ್ಯವನ್ನು ಸುಸ್ಥಿತಿಯಲ್ಲಿರಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಅನಾರೋಗ್ಯದ ಸಂದರ್ಭದಲ್ಲಿ ಪಾಶ್ಚಿಮಾತ್ಯ ಔಷಧಿ…
ಚಿಕ್ಕಮಗಳೂರು: ದೀಪಾವಳಿ ಹಬ್ಬದಲ್ಲಿ ಹಸಿರು ಪಟಾಕಿಗಳನ್ನು ಹೊರತು ಪಡಿಸಿ ಬೇರೆ ಯಾವುದೇ ಪಟಾಕಿಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು. ನಗರದ ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿರುವ ಕೆಸ್ವಾನ್‌ನಲ್ಲಿ ಇಂದು ಜಿಲ್ಲೆಯಲ್ಲಿ ಪಟಾಕಿ ತಯಾರಿಕೆ, ದಸ್ತಾನು ಹಾಗೂ ಹಸಿರು ಪಟಾಕಿ ಮಾರಾಟ ಮಾಡುವ ಕುರಿತು ಅಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದಲ್ಲಿ ಅವರು ಮಾತನಾಡಿದರು. ಹಸಿರು ಪಟಾಕಿಗಳನ್ನು ಹೊರತುಪಡಿಸಿ ಬೇರೆ ಪಟಾಕಿಗಳನ್ನು ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ರಾತ್ರಿ ೮.೦೦ ರಿಂದ ೧೦.೦೦ ಗಂಟೆ ವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಿದೆ. ಆದ ಕಾರಣ ವ್ಯಾಪಾರಸ್ಥರು ಸಾರ್ವಜನಿಕರಿಗೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕೆಂದು ತಿಳಿಸಿದರು ಪರಿಸರ ಸ್ನೇಹಿ ಪಟಾಕಿಗಳನ್ನು ಸಿಡಿಸುವ ಕುರಿತು ತಮ್ಮ ವ್ಯಾಪ್ತಿಯ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮ್ಟೆ ಮಾತನಾಡಿ ಜಿಲ್ಲೆಯಲ್ಲಿ ಪಟಾಕಿ ಮಾರಾಟ ಮಾಡಲು ಪರವಾನಗಿ ಪಡೆದಿರುವ ಮಾರಾಟಗಾರರು ಮಾತ್ರ…