Subscribe to Updates
Get the latest creative news from FooBar about art, design and business.
- e-paper (12-07-2025) Chikkamagalur Express
- ಲಕ್ಸಾಗರ ಕೆರೆಯನ್ನು ಪುನಶ್ಚೇತನಗೊಳಿಸುವಂತೆ ಮನವಿ
- ಚಿಕ್ಕಮಗಳೂರು-ಹಾಸನ ರೈಲು ಸಂಚಾರ ಎರಡು ವರ್ಷದಲ್ಲಿ ಆರಂಭ
- e-paper (11-07-2025) Chikkamagalur Express
- ಅಜ್ಞಾನ ಅಂಧಕಾರ ಅಳಿಸಿ ಸುಜ್ಞಾನ ಜ್ಯೋತಿ ಬೆಳಗಿಸುವರೇ ಗುರು
- ಮಹಿಳಾ ಸಬಲೀಕರಣಕ್ಕೆ ಬ್ಯಾಂಕ್ಗಳ ಮೂಲಕ ಸಾಲಸೌಲಭ್ಯ
- e-paper (10-07-2025) Chikkamagalur Express
- ವ್ಯಾಪಾರಸ್ಥರು ನಗರಸಭೆ ನಿಬಂಧನೆಗಳ ಪಾಲಿಸಬೇಕು
Author: chikkamagalur express
ಚಿಕ್ಕಮಗಳೂರು: ರಾಷ್ಟ್ರದ ಸಮಗ್ರತೆ ಹಾಗೂ ಐಕ್ಯತೆಯನ್ನು ಎತ್ತಿಹಿಡಿಯಲು ಕಾರ್ಯ ಕರ್ತರು ಮಾನಸಿಕವಾಗಿ ಸಜ್ಜಾಗಬೇಕು. ವಿಕಸಿತ ಭಾರತದ ಅಭಿವೃದ್ದಿಯನ್ನು ಸಮಾಜದ ಮುಂದಿಡಲು ಪಕ್ಷಾತೀತವಾಗಿ ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಣ್ಯಪಾಲ್ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಪಾಂಚಜನ್ಯ ಕಚೇರಿಯಲ್ಲಿ ನಗರ ಮಂಡಲದಿಂದ ಶುಕ್ರವಾರ ನಡೆದ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ ೧೧ ವರ್ಷ ಪೂರೈಸಿದ ಅಂಗವಾಗಿ ವಿಕಸಿತ ಭಾರತ ಸಂಕಲ್ಪ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿ ಹಿಂದಿನ ಕಾಂಗ್ರೆಸ್ ಆಳ್ವಿಕೆಯಲ್ಲಿ ಭಾರತ ನಿರುದ್ಯೋಗ, ಬಡತನ, ನಕ್ಸಲ್ ಹಾಗೂ ಭಯೋತ್ಪಾದನೆ ಚಟುವಟಿಕೆಗಳಿಂದ ನಲುಗಿ ಹೋಗಿತ್ತು. ೨೦೧೪ರಲ್ಲಿ ನರೇಂದ್ರ ಮೋದಿ ದೇಶದ ಚುಕ್ಕಾಣಿ ಹಿಡಿದ ಬಳಿಕ ದೇ ಶದ ಕಟ್ಟಕಡೆಯ ವ್ಯಕ್ತಿಗೂ ಸಮಾನತೆ ಯೋಜನೆಗಳನ್ನು ರೂಪಿಸಿ ಹಂತ ಹಂತವಾಗಿ ರಾಷ್ಟ್ರವನ್ನು ಬಲಿಷ್ಟ ಗೊಳಿಸಲು ಮುಂದಾದರು. ಭಾರತ ಸ್ವಾತಂತ್ರ್ಯಗೊಂಡು ಏಳು ದಶಕ ಪೂರೈಸಿದರೂ ಬಡವರ ಪಾಲಿಗೆ ಕನಸಾಗಿದ್ಧ ಬ್ಯಾಂಕ್ ಖಾ ತೆ, ಅಡುಗೆ ಸಿಲಿಂಡರ್, ಜನೌಷಧಿ ಕೇಂದ್ರ ತೆರೆದರು. ಯುವಕರ ಸ್ವಾವಲಂಬಿ…
ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನಿವೃತ್ತ ಎಲ್ಲಾ ಇಪಿಎಸ್ ಕಾರ್ಮಿಕರಿಗೆ, ಅಸಂಘಟಿತ ಕಾರ್ಮಿಕರಿಗೆ ೭೫೦೦ ರೂ ಪಿಂಚಣಿ ಹಾಗೂ ಆರೋಗ್ಯ ವಿಮೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ನೀಡಬೇಕೆಂದು ಎನ್‌ಎಸಿ ರಾಜ್ಯಾಧ್ಯಕ್ಷ ಜಿಎಸ್‌ಎಂ ಸ್ವಾಮಿ ಆಗ್ರಹಿಸಿದರು. ಅವರು ಇಂದು ನಗರದಲ್ಲಿ ನೂತನ ಎನ್‌ಎಸಿ ಘಟಕವನ್ನು ಉದ್ಘಾಟಿಸಿ ಮಾತನಾಡಿ, ನಿವೃತ್ತ ನೌಕರರಿಗೆ ಡಿಎ, ವಿಧವೆಯರಿಗೆ ಶೇ.೧೦ ರಷ್ಟು ಪಿಂಚಣಿ ಕೊಡಬೇಕೆಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದು ಹೇಳಿ ಇಪಿಎಸ್ ಕಾರ್ಮಿಕರು ಭವಿಷ್ಯ ನಿಧಿಯಲ್ಲಿ ಹಣ ತೊಡಗಿಸಿದ್ದು, ಈ ಹಣದಿಂದಲೇ ಪಿಂಚಣಿ ಕೊಡಬಹುದಾಗಿದೆ, ೯೦ ಸಾವಿರ ಕೋಟಿ ರೂ ಬಡ್ಡಿ ಬರುತ್ತಿದೆ ಎಂದು ಮಾಹಿತಿ ನೀಡಿದರು. ೬೮ ಸಾವಿರ ಪಿಂಚಣಿದಾರರಿಗೆ ೭೫೦೦ ರೂ ಮಾಸಿಕ ಪಿಂಚಣಿ ಕೊಡಬಹುದು. ಈ ನಾಲ್ಕು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮುಂದಿಟ್ಟು ರಾಷ್ಟ್ರಾಧ್ಯಂತ ಪ್ರವಾಸ ಕೈಗೊಂಡು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎನ್‌ಎಸಿ ಘಟಕಗಳನ್ನು ಸ್ಥಾಪಿಸುತ್ತಿರುವುದಾಗಿ ತಿಳಿಸಿದರು. ಭಾರತದ ೫೪೩ ಸಂಸದರನ್ನು ಈಗಾಗಲೇ ಭೇಟಿಮಾಡಿ, ಸಂಸತ್‌ನಲ್ಲಿ ನಮ್ಮ ಪರವಾಗಿ ಧ್ವನಿ ಎತ್ತುವಂತೆ ಹಲವು…
ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತ ಸಮಸಮಾಜ ನಿರ್ಮಾಣ ಹಾಗೂ ಸರ್ವ ಜನಾಂಗದ ಎಲ್ಲಾ ಶೋಷಿತರು ಬಡವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಟಿಬದ್ಧವಾಗಿದ್ದು ಈ ತಳಹದಿಯ ಮೇಲೆ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಖಂಡರು, ಕಾರ್ಯಕರ್ತರು ಮುಂದಾಗಬೇಕೆಂದು ವೈದ್ಯಕೀಯ ಶಿಕ್ಷಣ ಕೌಶಲ್ಯ ಇಲಾಖೆ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಕರೆ ನೀಡಿದರು. ಅವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೋಂಡು ಮಾತನಾಡಿ ಕಳೆದ ೨ ವರ್ಷಗಳಿಂದ ರಾಜ್ಯ ಸರ್ಕಾರ ಜನಪರ, ಜನಹಿತವಾಗಿ ಆಡಳಿತ ನಡೆಸುತ್ತಿದ್ದು ಈ ಬಗ್ಗೆ ಪಕ್ಷದ ಕಾರ್ಯಕರ್ತರು, ಮುಖಂಡರು ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡುವ ಮೂಲಕ ವಿಪಕ್ಷಗಳ ಆರೋಪಕ್ಕೆ ಉತ್ತರ ನೀಡಬೇಕೆಂದು ತಿಳಿಸಿದರು. ರಾಜ್ಯ ಸರ್ಕಾರ ಭರವಸೆ ನೀಡಿದಂತೆ ಪಂಚಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶ್ರಮಿಸಿ ನುಡಿದಂತೆ ನೆಡೆದ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು. ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪದೆಪದೇ ಟೀಕೆ ಮಾಡುತ್ತಿದೆ…
ಚಿಕ್ಕಮಗಳೂರು: ಮಕ್ಕಳು ತಮ್ಮ ಬಾಲ್ಯಾವಸ್ಥೆಯನ್ನು ಆನಂದದಿಂದ ಕಳೆಯಬೇಕು. ಹಾಗೆಯೇ ಅವರು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ವಿ. ಹನುಮಂತಪ್ಪ ಹೇಳಿದರು. ನಗರದ ಮಲೆನಾಡು ವಿದ್ಯಾಸಂಸ್ಥೆಯ ಶ್ರೀಮತಿ ಸುಂದರಮ್ಮ ಶಂಕರಮೂರ್ತಿ ಸಭಾಂಗಣದಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಪೊಲೀಸ್ ಇಲಾಖೆ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರೇತರ ಸಂಸ್ಥೆಗಳು ಹಾಗೂ ವೃತ್ತಿ ಸಂಘಟನೆಗಳ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅವರನ್ನು ದುಡಿಮೆಗೆ ಹಚ್ಚಿದಲ್ಲಿ ಅವರ ಬಾಲ್ಯವನ್ನು ಕಸಿದುಕೊಂಡಂತಾಗುತ್ತದೆ…
ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಬೇಕೆಂಬ ಉದ್ದೇಶದೊಂದಿಗೆ ಟೂಲ್‌ಕಿಟ್ ವಿತರಣೆಯಂತಹ ಸಾರ್ವತ್ರಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಇಂದು ನಗರಸಭೆ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಶ ಯೋಜನೆಯಾದ ಪಿ.ಎಂ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಟೂಲ್‌ಕಿಟ್ ವಿತರಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ವಿವಿಧ ೧೮ ಕುಲ ಕಸುಬುಗಳ ಟೂಲ್‌ಕಿಟ್‌ಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ಸೌಲಭ್ಯಗಳೇ ಆದರೂ ಎಲ್ಲರೂ ಒಟ್ಟಾಗಿ ಜನರಿಗೆ ತಲುಪಿಸಬೇಕು, ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡು ಆರ್ಥಿಕ ಸಬಲರಾಗಬೇಕೆಂದು ಕರೆ ನೀಡಿದರು. ಪ್ರಧಾನಿ ನರೇಂದ್ರ ಮೋದಿಯವರು ಭಾರತದಲ್ಲಿ ವಿಶ್ವಕರ್ಮ ಯೋಜನೆ ಅನುಷ್ಠಾನಕ್ಕೂ ಮೊದಲು ೧೮ ವೃತ್ತಿಪರ ಕುಲ ಕಸುಬುಗಳನ್ನೊಳಗೊಂಡ ಈ ಕೆಲಸ ಕಾರ್ಯಗಳಿಗೆ ಆರ್ಥಿಕ ಶಕ್ತಿ ತುಂಬಿ, ತರಬೇತಿ ಕೊಟ್ಟು, ಸಾಲ ಸೌಲಭ್ಯ ನೀಡಿ ಸಲಕರಣೆಗಳನ್ನು ಕೊಟ್ಟು ಆಯಾ ವೃತ್ತಿಗೆ ಉತ್ತೇಜನ ನೀಡುವ ಸಲುವಾಗಿ ಸ್ವ-ಉದ್ಯೋಗ ಸ್ಥಾಪಿಸುವ ಆಲೋಚನೆಯ ಉದ್ದೇಶವೆ…
ಚಿಕ್ಕಮಗಳೂರು: ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನೀರಿನ ಸಮಸ್ಯೆ ಬಗೆಹರಿಸಲು ಮಳೆ ನೀರಿನ ಕೊಯ್ಲು ಯೋಜನೆಯನ್ನು ೩.೫ ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ ಅವರು ತಿಳಿಸಿದರು. ಇಂದು ಮಧ್ಯಾಹ್ನ ನಗರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಅಭಿವೃದ್ಧಿ ವೀಕ್ಷಣೆ ಮಾಡಿದ ಬಳಿಕ ಅವರು ಮಾತನಾಡಿ, ಇಲ್ಲಿನ ನೀರಿನ ಸಮಸ್ಯೆ ಬಗ್ಗೆ ಈಗಾಗಲೇ ಕ್ಷೇತ್ರದ ಶಾಸಕರಾದ ಹೆಚ್.ಡಿ.ತಮ್ಮಯ್ಯ ಅವರು ಹಾಗೂ ಸಂಸ್ಥೆಯ ನಿರ್ದೇಶಕರು ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ತಾವು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಗತಿ ವೀಕ್ಷಣೆ ಸಲುವಾಗಿ ಆಗಮಿಸಿದ್ದಾಗಿ ತಿಳಿಸಿದ ಅವರು, ಈಗಾಗಲೇ ಸಂಸ್ಥೆಯ ಕಾಮಗಾರಿ ಶೇ.೯೮ ರಷ್ಟು ಪೂರ್ಣಗೊಂಡಿದೆ ಎಂದರು. ಹಾಗೆಯೇ ಬಹು ನಿರೀಕ್ಷಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ತಾಯಿ-ಮಗುವಿನ ಆರೈಕೆ ಕೇಂದ್ರದ ಕಾಮಗಾರಿ ಕೂಡ ಶೇ.೭೫ ರಷ್ಟು ಪೂರ್ಣಗೊಂಡಿದೆ ಎಂದು ತಿಳಿಸಿದರು.…
ಚಿಕ್ಕಮಗಳೂರು: ಸ್ವಾರ್ಥಕ್ಕೆ ಆಸೆಪಡದೇ, ನಿಸ್ವಾರ್ಥದಿಂದ ಭಾರತೀಯರ ಉಜ್ವಲ ಭವಿ ಷ್ಯಕ್ಕೆ ಹಗಲಿರುನ್ನದೇ ನಿರಂತರ ದುಡಿಯುತ್ತಿರುವ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಇಡೀ ವಿಶ್ವವೇ ಕಂಡ ಅಪರೂಪದ ಪ್ರಜಾಪ್ರಭುತ್ವ ಆಳ್ವಿಕೆಯಾಗಿದೆ ಎಂದು ಉಪಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು. ನಗರದ ಜಿಲ್ಲಾ ಬಿಜೆಪಿ ಪಾಂಚಜನ್ಯ ಕಚೇರಿಯಲ್ಲಿ ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ ಅವರ ೧೧ ವ?ಗಳ ಅಭಿವೃದ್ಧಿ ಕುರಿತ ವಿಕಸಿತ ಭಾರತ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಉದ್ಘಾ ಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಬಡವರು, ದೀನದಲಿತರ ಏಳಿಗೆಗೆ ಹಲವು ಯೋಜನೆಗಳನ್ನು ಅನುಷ್ಟಾನಕ್ಕೆ ತಂದು ದಶಕವನ್ನು ಪೂರೈಸಿ ಸಾಧನೆ ಮಾಡಿದೆ. ಸದಾಕಾಲ ರಾಷ್ಟ್ರ ಹಿತಕ್ಕಾಗಿ ದುಡಿಯುತ್ತಿರುವ ಪ್ರಧಾನಿ ಮಂತ್ರಿಗ ಳು ಭಾರತಾಂಬೆಗೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುತ್ತಿರುವ ವಿಚಾರವನ್ನು ಎಲ್ಲೆಡೆ ಪಸರಿಸಬೇಕಿದೆ ಎಂದರು. ಹಿಂದಿನ ಆಟಲ್ ಬಿಹಾರಿ ವಾಜಪೇಯಿ ಅಭಿವೃದ್ದಿ ಕಾರ್ಯಗಳು ತಳಮಟ್ಟದಿಂದ ಪ್ರಚಾರಗೊಳ್ಳದ ಕಾ ರಣ ಅಧಿಕಾರದಿಂದ ಕೆಳಗಿಳಿಯಬೇಕಾಯಿತು. ಆದರೀಗ ಮೋದಿ ಸರ್ಕಾರದ ಯೋಜನೆಗಳು ಜನಸಾಮಾ ನ್ಯರಿಗೆ ಅರಿವು ಹಾಗೂ ವಿ.ಪಕ್ಷಗಳ…